224 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಟಿಕೆಟ್ ಘೋಷಣೆ: ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್

ಬೆಂಗಳೂರು:ಮಾ-28: ರಾಜ್ಯ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ಪಕ್ಷಗಳಲ್ಲಿ ಟಿಕೆಟ್ ಹಂಚಿಕೆಯ ಸಿದ್ಧತೆ ಜೋರಾಗಿದೆ. ಏತನ್ಮಧ್ಯೆ ಕಾಂಗ್ರೆಸ್ ಪಕ್ಷದ ಟಿಕೆಟ್ ಹಂಚಿಕೆ ಸಂಬಂಧ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ನಾನು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಜಿಲ್ಲೆಗಳ ಉಸ್ತುವಾರಿ ಸಚಿವರ ಜತೆ ಯಾರಿಗೆ ಟಿಕೆಟ್ ನೀಡಬೇಕು ಎಂಬ ಬಗ್ಗೆ ಚರ್ಚಿಸುವುದಾಗಿ ಹೇಳಿದರು.

ಕಾಂಗ್ರೆಸ್ ಪಕ್ಷದ ಟಿಕೆಟ್ ಹಂಚಿಕೆ ಬಗ್ಗೆ ಅಂತಿಮ ನಿರ್ಧಾರ ಕೈಗೊಂಡು 224 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಟಿಕೆಟ್ ಘೋಷಣೆ ಮಾಡಲಾಗುವುದು ಎಂದು ತಿಳಿಸಿದರು.

ticket-announcement, 224-constituencies,G parameshwar

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ