ಎಟಿಎಂಗೆ ಹಣ ತುಂಬುವ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ನೌಕರನೊಬ್ಬ ಆತ್ಮಹತ್ಯೆ:

Execution Sling Hanging Hangman Knot Penalty Rope

ಬೆಂಗಳೂರು, ಮಾ.29-ಎಟಿಎಂಗೆ ಹಣ ತುಂಬುವ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ನೌಕರನೊಬ್ಬ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಮಾಕ್ಷಿಪಾಳ್ಯ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೂಲತಃ ಕುಣಿಗಲ್ ತಾಲೂಕಿನವನಾದ ಕಳಸೇಗೌಡ ಅಲಿಯಾಸ್ ಸುರೇಶ್ ಆತ್ಮಹತ್ಯೆ ಮಾಡಿಕೊಂಡಿರುವ ನೌಕರ. ಈತ ನಗರದ ಕೆಂಗುಂಟೆಯಲ್ಲಿ ವಾಸವಿದ್ದು, ಎಟಿಎಂಗೆ ಹಣ ತುಂಬುವ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ.
ಈತ ನಿನ್ನೆ ಬೆಳಗ್ಗೆಯಿಂದ ನಾಪತ್ತೆಯಾಗಿದ್ದ. ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯ ಪೂಜಾ ಕಲ್ಯಾಣ ಮಂಟಪ ಸಮೀಪ ಖಾಲಿ ಜಾಗದಲ್ಲಿದ್ದ ಹೊಂಗೆ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಗ್ಗೆ ಗೊತ್ತಾಗಿದೆ.
ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಕಾಮಾಕ್ಷಿಪಾಳ್ಯ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ