ಕಾಂಗ್ರೆಸ್ ಹಾಗೂ ಜೆಡಿಎಸ್ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವಂತೆ ಪ್ರಗತಿಪರ ಹೋರಾಟಗಾರರ ನಿಯೋಗ ಮನವಿ

ಬೆಂಗಳೂರು:ಮಾ-29: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪ್ರಗತಿಪರ ಹೋರಾಟಗಾರರ ನಿಯೋಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿತು.

ಹಿರಿಯ ಚಿಂತಕ ಎ.ಕೆ ಸುಬ್ಬಯ್ಯ, ಕೋಮುಸೌಹಾರ್ದ ವೇದಿಕೆಯ ಕೆ.ಎಲ್. ಅಶೋಕ್, ಹಿರಿಯ ಪತ್ರಕರ್ತ ಇಂದೂಧರ ಹೊನ್ನಾಪುರ್ ಅವರನ್ನೊಳಗೊಂಡ ಪ್ರಗತಿಪರ ಹೋರಾಟಗಾರರ ನಿಯೋಗ ಗೃಹ ಕಚೇರಿ ಕೃಷ್ಣಾಗೆ ತೆರಳಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿತು. ಸಿಎಂ ಜೊತೆ ಕೆಲಕಾಲ ಮಾತುಕತೆ ನಡೆಸಿದ ನಿಯೋಗದ ಸದಸ್ಯರು ರಾಜ್ಯ ರಾಜಕೀಯ ಕುರಿತು ಮಾತುಕತೆ ನಡೆಸಿದರು. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಗತ್ಯ‌ವಿದೆ. ಮೈತ್ರಿ ಕುರಿತು ಚಿಂತನೆ ನಡೆಸುವಂತೆ ಮನವಿ ಮಾಡಿದೆ.

ಸಿಎಂ ಭೇಟಿ ಬಳಿಕ ಬಳಿಕ ಮಾತನಾಡಿದ ಹಿರಿಯ ಚಿಂತಕ ಎ.ಕೆ. ಸುಬ್ಬಯ್ಯ, ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಜಾತ್ಯಾತೀತ ಪಕ್ಷಗಳು ಒಂದಾಗಿ ಈ ಕಾರ್ಯತಂತ್ರ ರೂಪಿಸಬೇಕು‌. ಮತಗಳು ವಿಭಜನೆಯಾಗಿ ಬಿಜೆಪಿಗೆ ಲಾಭವಾಗಬಾರದು ಈ ನಿಟ್ಟಿನಲ್ಲಿ ದೇವೇಗೌಡರ ಜೊತೆಯೂ ಚರ್ಚಿಸಲಾಗಿದೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಿದ್ದೇವೆ ಎಂದರು.

Congress and JDS Alliance,Request,delegation of progressive fighters,Chief Minister Siddaramaiah,Meet

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ