ಏ.4ರಂದು ಕೋಲಾರ ಜಿಲ್ಲೆಗೆ ರಾಹುಲ ಗಾಂಧಿ ಭೇಟಿ

ಕೋಲಾರ, ಮಾ.29- ಜಿಲ್ಲೆಯ ಆರು ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಿಸಲೇಬೇಕು ಎಂದು ಪಣತೊಟ್ಟು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರು ಏ.4ರಂದು ಜಿಲ್ಲೆಗೆ ಭೇಟಿ ನೀಡಿ ರೋಡ್ ಶೋ ನಡೆಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರರೆಡ್ಡಿ ಪತ್ರಿಕೆಗೆ ತಿಳಿಸಿದ್ದಾರೆ.
ಅಂದು ಬೆಳಗ್ಗೆ 11 ಗಂಟೆಗೆ ಮುಳಬಾಗಿಲು ಹೆಲಿಪ್ಯಾಡ್‍ಗೆ ಆಗಮಿಸಿ ನಂತರ ರೋಡ್ ಶೋ ನಡೆಲಿದ್ದಾರೆ. ಬೇತಮಂಗಲದಲ್ಲಿ ರೋಡ್ ಶೋ ನಡೆಸಿ ನಂತರ ರಾಜ್ಯದ ಪ್ರಥಮ ಮುಖ್ಯಮಂತ್ರಿ ಕ್ಯಾಸಂಬಳ್ಳಿಯ ಕೆ.ಸಿ.ರೆಡ್ಡಿ ಅವರ ಮನೆಗೆ ತೆರಳಿ ಆನಂತರ ಕೆಜಿಎಫ್, ಮಾಲೂರು ಹಾಗೂ ಕೋಲಾರ ತಾಲ್ಲೂಕಿನ ವೇಮಗಲ್‍ಗೆ ತೆರಳಿ ರೋಡ್ ಶೋ ನಡೆಸಲಿದ್ದಾರೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ