2016ರಲ್ಲಿ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಕ್ಯಾತಮಾರನಹಳ್ಳಿ ರಾಜು ಮನೆಗೆ ಅಮಿತ್ ಶಾ ಭೇಟಿ

ಮೈಸೂರು:ಮಾ-30: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತಂದರೆ ಬಿಜೆಪಿ ಹಾಗೂ ಆರ್ ಎಸ್ ಎಸ್ ಕಾರ್ಯಕರ್ತರ ಹತ್ಯೆಗೈದ ಹಂತಕರಿಗೆ ಶಿಕ್ಷೆ ಕೊಡಿಸಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭರವಸೆ ನೀಡಿದ್ದಾರೆ.

2016ರಲ್ಲಿ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಕ್ಯಾತಮಾರನಹಳ್ಳಿ ರಾಜು ಮನೆಗೆ ಭೇಟಿ ನೀಡಿದ ಅಮಿತ್ ಶಾ, ರಾಜು ಕುಟುಂಬ ಸದಸ್ಯರನ್ನು ಭೇಟಿಯಾದರು. ಅಲ್ಲದೇ ಪಕ್ಷದ ವತಿಯಿಂದ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿಯೂ ಭರವಸೆ ನೀಡಿದ್ದಾರೆ.

ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವಂತೆ ರಾಜು ತಾಯಿ ಚಂದ್ರಮ್ಮ ಈ ಸಂದರ್ಭದಲ್ಲಿ ಶಾ ಅವರಲ್ಲಿ ಮನವಿ ಮಾಡಿಕೊಂಡರು. ಅಮಿತ್ ಶಾ ಭೇಟಿ ವೇಳೆ ಕೇಂದ್ರ ಸಚಿವ ಅನಂತ್ ಕುಮಾರ್, ಸಂಸದ ಪ್ರತಾಪ್ ಸಿಂಹ ಜತೆಗಿದ್ದರು.

assembly election 2018,Mysore,Amith shah

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ