
ಬೆಂಗಳೂರು, ಮಾ.30- ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅಂಬೇಡ್ಕರ್ ಸಮಾಜ ಪಾರ್ಟಿ ಅಭ್ಯರ್ಥಿಗಳ ಮೊದಲ ಪಟ್ಟಿ ಹಾಗೂ ಪಕ್ಷದ ಪ್ರಣಾಳಿಕೆಯನ್ನು ಪ್ರೆಸ್ಕ್ಲಬ್ನಲ್ಲಿಂದು ಬಿಡುಗಡೆ ಮಾಡಲಾಯಿತು.
ಸುದ್ದಿಗೋಷ್ಠಿಯಲ್ಲಿ ಪಕ್ಷದ ಅಧ್ಯಕ್ಷ ಎಂ.ಡಿ. ಅಶೋಕ್ ಮಾತನಾಡಿ, ಚುನಾವಣೆಯಲ್ಲಿ ಸ್ಪರ್ಧಿಸುವ 25 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಉನ್ನುಳಿದ ಅಭ್ಯರ್ಥಿಗಳನ್ನು ಪಟ್ಟಿಯನ್ನು ಏ.15ರಂದು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಹಿರಿಯ ನಾಗರಿಕರಿಗೆ ಮಾಶಾಸನವನ್ನು 2000 ರೂ.ಗೆ ನಿಗದಿ ಮಾಡಲಾಗುವುದು, 14 ವರ್ಷದ ಒಳಗಿನ ಬಡ ಮಕ್ಕಳಿಗೆ ಉಚಿತ ಶಿಕ್ಷಣ, 60 ವರ್ಷ ಮೇಲಪಟ್ಟವರಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡಲಾಗುವುದು. ಅಲ್ಲದೆ ರೈತರ ಸಾಲಮನ್ನಾ, ಬಿಪಿಎಲ್ ಪಡಿತದಾರರಿಗೆ ಅಕ್ಕಿ ಎಣ್ಣೆ, ಸಕ್ಕರೆ ಬೇಳೆ, ಸಾಬೂನು, ಶಾಂಪೂಗಳನ್ನು ಉಚಿತ ನೀಡಲಾಗುವುದು ಹಾಗೂ ಉಚಿತ ಆರೋಗ್ಯ ಸೌಲಭ್ಯ ನೀಡಲಾಗುವುದು ಎಂದು ತಿಳಿಸಿದರು.