ಮೈಸೂರು:ಮಾ-30: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಅಂಬಾವಿಲಾಸ ಅರಮನೆಗೆ ಭೇಟಿ ನೀಡಿ ರಾಜವಂಶಸ್ಥರ ಜೊತೆ ಮಾತುಕತೆ ನಡೆಸಿದರು.
ಚುನಾವಣಾ ಪ್ರಚಾರಕ್ಕೆ ಮೈಸೂರಿಗೆ ಆಗಮಿಸಿದ ಅಮಿತ್ ಶಾ ಅರಮನೆಗೆ ಭೇಟಿ ನೀಡಿದರು. ಅರಮನೆಗೆ ಭೇಟಿ ನೀಡಿದ ಅಮಿತ್ ಶಾ ಅವರನ್ನ ರಾಜವಂಶಸ್ಥರು ಹೂಗುಚ್ಛ ನೀಡಿ ಸ್ವಾಗತಿಸಿದರು.
ನಂತರ ಸುಮಾರು 30 ನಿಮಿಷಗಳ ಕಾಲ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹಾಗೂ ಯದುವೀರ್ ಒಡೆಯರ್ ಜೊತೆ ಅರಮನೆಯ ಖಾಸಗಿ ನಿವಾಸದಲ್ಲಿ ಅಮಿತ್ ಶಾ ಮಾತುಕತೆ ನಡೆಸಿದರು.
ಇದೇವೇಳೆ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಪ್ರಚಾರ ಮಾಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಈ ವೇಳೆ ಕೇಂದ್ರ ಸಚಿವ ಅನಂತಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಸಂಸದ ಪ್ರತಾಪ್ ಸಿಂಹ, ಶಾಸಕ ಸಿ.ಟಿ.ರವಿ ಸೇರಿದಂತೆ ಪ್ರಮುಖರು ಇದ್ದರು.
ಇದಕ್ಕೂ ಮೊದಲು ಅಮಿತ್ ಶಾ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ಜೊತೆ ಮಾತುಕತೆ ನಡೆಸಿದರು.
Karnataka Assembly Election,Mysore,BJP,amith shah,Wadiyar family