
ಬೆಂಗಳೂರು,ಮಾ.31-ಕಾರು ಮೋಟಾರ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿರುವ ಘಟನೆ ಯಶವಂತಪುರ ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ರಾಜರಾಜೇಶ್ವರಿನಗರದ ಲಗ್ಗೆರೆ ನಿವಾಸಿ ವೇದಕುಮಾರ್(24) ಮೃತಪಟ್ಟ ಬೈಕ್ ಸವಾರ.
ಈತ ಫ್ಯಾಕ್ಟರಿಯೊಂದರಲ್ಲಿ ಸೂಪರ್ವೈಸರ್ ಆಗಿ ಕೆಲಸ ಮಾಡುತ್ತಿದ್ದ. ನಿನ್ನೆ ಮಧ್ಯರಾತ್ರಿ 12.15ರ ಸಮಯದಲ್ಲಿ ಕೆಲಸ ಮುಗಿಸಿ ಮೋಟಾರ್ ಬೈಕ್ನಲ್ಲಿ ಮನೆಗೆ ಹೋಗುತ್ತಿದ್ದಾಗ ಔಟರ್ ರಿಂಗ್ ರೋಡ್ ಎಂಇಎಸ್ ಜಂಕ್ಷನ್ ರೈಲ್ವೆ ಗೇಟ್ ಸಮೀಪ ಕಾರು ಬೈಕ್ಗೆ ಡಿಕ್ಕಿ ಹೊಡೆದಿದೆ.
ಗಂಭೀರವಾಗಿ ಗಾಯಗೊಂಡಿದ್ದ ಈತನನ್ನು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾನೆ.
ಈತನ ಮೃತದೇಹವನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಇಡಲಾಗಿದ್ದು , ಯಶವಂತಪುರ ಸಂಚಾರಿ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.