ಮೆಲ್ಬೂರ್ನ್:ಮಾ-31: ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ವೇಳೆ ಚೆಂಡು ವಿರೂಪಗೊಳಿಸಿರುವ ಆರೋಪದಡಿ ಸಿಲುಕಿ 1ವರ್ಷಗಳ ಕಾಲ ನಿಷೇಧಕ್ಕೊಳಗಾಗಿರುವ ಆಸ್ಟ್ರೇಲಿಯಾ ತಂಡದ ಮಾಜಿ ಉಪನಾಯಕ ಡೇವಿಡ್ ವಾರ್ನರ್ ಇನ್ನೆಂದೂ ಆಸ್ಟ್ರೇಲಿಯಾ ಪರ ಕ್ರಿಕೆಟ್ ಆಡುವುದಿಲ್ಲ ಎಂದಿದ್ದಾರೆ.
ಚೆಂಡು ವಿರೂಪಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಕೆಟ್ ಆಸ್ಟ್ರೇಲಿಯಾ ತನಿಖೆ ನಡೆಸಿ ಆರೋಪ ಸಾಭೀತುಗೊಂಡ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ವಾರ್ನರ್, ಬಾಲ್ ಟ್ಯಾಂಪರಿಂಗ್ ಮಾಡಿರುವ ಸಂಪೂರ್ಣ ಜವಾಬ್ದಾರಿ ನಾನು ಹೊರುತ್ತೇನೆ. ನಾನು ನನ್ನ ಜೀವಿತಾವಧಿಯವರೆಗೆ ಈ ಬಗ್ಗೆ ಕ್ಷಮೆ ಕೋರುತ್ತೇನೆ. ಆಸೀಸ್ ಜನತೆ, ಕ್ರಿಕೆಟ್ ಅಭಿಮಾನಿಗಳು ಕ್ಷಮಿಸಿ ಎಂದು ಭಾವುಕರಾಗಿ ಕಣ್ಣೀರಿಟ್ಟರು.
ನನಗೆ ತಂಡವನ್ನು ಗೆಲ್ಲಿಸುವುದಷ್ಟೇ ಮುಖ್ಯವಾಗಿತ್ತು. ಹಾಗಾಗಿ ಈ ನಿರ್ಧಾರ ತೆಗೆದುಕೊಂಡೆ. ಇದರಿಂದ ಆಗುವ ವ್ಯತಿರಿಕ್ತ ಪರಿಣಾಮ ಅರ್ಥಮಾಡಿಕೊಳ್ಳಲಿಲ್ಲ. ಈ ಬಗ್ಗೆ ನನ್ನ ಜೀವವಿರುವವರೆಗೂ ಕೊರಗು ಕಾಡುತ್ತದೆ ಎಂದು ವಾರ್ನರ್ ಹೇಳಿದ್ದಾರೆ.
Australia ball-tampering,David Warner,not playing for country again