ಚೆಂಡು ವಿರೂಪಗೊಳಿಸಿದ ಪ್ರಕರಣ: ಇನ್ನೆಂದೂ ಆಸ್ಟ್ರೇಲಿಯಾ ತಂಡದ ಪರ ಕ್ರಿಕೆಟ್ ಆಡುವುದಿಲ್ಲ: ಡೇವಿಡ್‌ ವಾರ್ನರ್‌

ಮೆಲ್ಬೂರ್ನ್‌:ಮಾ-31: ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್‌‌ ಪಂದ್ಯದ ವೇಳೆ ಚೆಂಡು ವಿರೂಪಗೊಳಿಸಿರುವ ಆರೋಪದಡಿ ಸಿಲುಕಿ 1ವರ್ಷಗಳ ಕಾಲ ನಿಷೇಧಕ್ಕೊಳಗಾಗಿರುವ ಆಸ್ಟ್ರೇಲಿಯಾ ತಂಡದ ಮಾಜಿ ಉಪನಾಯಕ ಡೇವಿಡ್‌ ವಾರ್ನರ್‌ ಇನ್ನೆಂದೂ ಆಸ್ಟ್ರೇಲಿಯಾ ಪರ ಕ್ರಿಕೆಟ್​ ಆಡುವುದಿಲ್ಲ ಎಂದಿದ್ದಾರೆ.

ಚೆಂಡು ವಿರೂಪಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಕೆಟ್‌ ಆಸ್ಟ್ರೇಲಿಯಾ ತನಿಖೆ ನಡೆಸಿ ಆರೋಪ ಸಾಭೀತುಗೊಂಡ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ವಾರ್ನರ್‌, ಬಾಲ್‌ ಟ್ಯಾಂಪರಿಂಗ್‌ ಮಾಡಿರುವ ಸಂಪೂರ್ಣ ಜವಾಬ್ದಾರಿ ನಾನು ಹೊರುತ್ತೇನೆ. ನಾನು ನನ್ನ ಜೀವಿತಾವಧಿಯವರೆಗೆ ಈ ಬಗ್ಗೆ ಕ್ಷಮೆ ಕೋರುತ್ತೇನೆ. ಆಸೀಸ್‌ ಜನತೆ, ಕ್ರಿಕೆಟ್‌ ಅಭಿಮಾನಿಗಳು ಕ್ಷಮಿಸಿ ಎಂದು ಭಾವುಕರಾಗಿ ಕಣ್ಣೀರಿಟ್ಟರು.

ನನಗೆ ತಂಡವನ್ನು ಗೆಲ್ಲಿಸುವುದಷ್ಟೇ ಮುಖ್ಯವಾಗಿತ್ತು. ಹಾಗಾಗಿ ಈ ನಿರ್ಧಾರ ತೆಗೆದುಕೊಂಡೆ. ಇದರಿಂದ ಆಗುವ ವ್ಯತಿರಿಕ್ತ ಪರಿಣಾಮ ಅರ್ಥಮಾಡಿಕೊಳ್ಳಲಿಲ್ಲ. ಈ ಬಗ್ಗೆ ನನ್ನ ಜೀವವಿರುವವರೆಗೂ ಕೊರಗು ಕಾಡುತ್ತದೆ ಎಂದು ವಾರ್ನರ್​ ಹೇಳಿದ್ದಾರೆ.

Australia ball-tampering,David Warner,not playing for country again

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ