ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚನೆ ಸಾಧ್ಯವಿಲ್ಲ: ಸುಪ್ರೀಂಕೋರ್ಟ್‍ಗೆ ಕೇಂದ್ರ ಸರ್ಕಾರ ಅಫಿಡೆವಿಟ್ ಸಲ್ಲಿಕೆ:

ನವದೆಹಲಿ, ಮಾ.31- ಸದ್ಯದ ಪರಿಸ್ಥಿತಿಯಲ್ಲಿ ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚನೆ ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‍ಗೆ ಕೇಂದ್ರ ಸರ್ಕಾರ
ಅಫಿಡೆವಿಟ್ ಸಲ್ಲಿಸಿದೆ. ಕರ್ನಾಟಕದಲ್ಲಿ ಚುನಾವಣೆ ನಡೆಯುತ್ತಿದ್ದು , ಈ ಸಂದರ್ಭದಲ್ಲಿ ಮಂಡಳಿ ರಚಿಸುವುದು ಸರಿಯಲ್ಲ. ನದಿ ನೀರಿನ ಹಂಚಿಕೆ ಅತಿ ಸೂಕ್ಷ್ಮವಾದ ವಿಷಯವಾಗಿರುವುದರಿಂದ ಆತುರದಲ್ಲಿ ನಿರ್ಧಾರ ತೆಗೆದುಕೊಳ್ಳುವುದು ಸಾಧ್ಯವಿಲ್ಲ ಎಂದು ತಿಳಿಸಲಾಗಿದೆ. ಈಗಾಗಲೇ ತಮಿಳುನಾಡಿನ ಸಂಸದರು ಲೋಕಸಭೆಯಲ್ಲಿ ನಿರ್ವಹಣಾ ಮಂಡಳಿ ರಚನೆಗೆ ಪಟ್ಟು ಹಿಡಿದು ನಾನಾ ರೀತಿಯ ತಂತ್ರಗಳನ್ನು ನಡೆಸುತ್ತಿದ್ದು , ಇದೇ ವೇಳೆ ಸುಪ್ರೀಂಕೋರ್ಟ್‍ಗೆ ನ್ಯಾಯಾಂಗ ನಿಂದನಾ
ಅರ್ಜಿಯನ್ನು ಕೂಡ ಸಲ್ಲಿಸಿದೆ. ಇದರ ನಡುವೆ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‍ಗೆ ತನ್ನ ಅಭಿಪ್ರಾಯವನ್ನು ಅಫಿಡೆವಿಟ್ ಮೂಲಕ ಕಾಲಾವಕಾಶ ಕೋರಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ