ಕಾವೇರಿ ನದಿ ನೀರು ಹಂಚಿಕೆ ವಿವಾದ: ಸುಪ್ರೀಂಕೋರ್ಟ್ ನಲ್ಲಿ ಸ್ಪಷ್ಟೀಕರಣ ಅರ್ಜಿ ಸಲ್ಲಿಸಿದ ಕೇಂದ್ರ

ನವದೆಹಲಿ:ಮಾ-31: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಸ್ಪಷ್ಟೀಕರಣ ಅರ್ಜಿಯೊಂದನ್ನು ಸಲ್ಲಿಸಿದ್ದು, 3 ತಿಂಗಳ ಕಾಲಾವಕಾಶ ನೀಡುವಂತೆ ಮನವಿ ಮಾಡಿಕೊಂಡಿದೆ.

ಕಾವೇರಿ ವಿವಾದ ಸಂಬಂಧ ಕೇಂದ್ರ ಸರ್ಕಾರದ ಪರವಾಗಿ ಸುಪ್ರೀಂಕೋರ್ಟ್ ಬಳಿ ಅಟಾರ್ನಿ ಜನರಲ್ ಮುಕುಲ್ ರೊಹ್ಟಗಿಯವರು, ಸ್ಪಷ್ಟೀಕರಣ ಅರ್ಜಿಯನ್ನು ಸಲ್ಲಿಸಿದ್ದು, ಅರ್ಜಿಯಲ್ಲಿ ಕೇಂದ್ರ ಸರ್ಕಾರ ಕಾವೇರಿ ನಿರ್ವಹಣಾ ಮಂಡಳಿ ಕುರಿತ ನಿಬಂಧನೆಗಳನ್ನು ಮಾರ್ಪಡಿಸಬಹುದೇ ಎಂದು ಕೇಳಲಾಗಿದೆ. ಅಲ್ಲದೆ, ನಿರ್ವಹಣಾ ಮಂಡಳಿ ರಚನೆಗೆ ಮೂರು ತಿಂಗಳ ಕಾಲಾವಕಾಶ ನೀಡುವಂತೆ ಮನವಿ ಮಾಡಿಕೊಳ್ಳಲಾಗಿದೆ.

ಕಳೆದ ಫೆಬ್ರವರಿ 16ರಂದು ಸುಪ್ರೀಂಕೋರ್ಟ್ ಕಾವೇರಿ ವಿವಾದ ಕುರಿತಂತೆ ಅಂತಿಮ ತೀರ್ಪು ನೀಡಿದ್ದು, 6 ವಾರಗಳೊಳಗೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಆದೇಶ ನೀಡಿತ್ತು. ನ್ಯಾಯಾಲಯದ ಆದೇಶದಂತೆ ಆರು ವಾರಗಳ ಗಡುವು ಪೂರ್ಣಗೊಂಡಿದ್ದರೂ, ಕೇಂದ್ರ ಸರ್ಕಾರ ನಿರ್ವಹಣಾ ಮಂಡಳಿಯನ್ನು ರಚನೆ ಮಾಡಿಲ್ಲ ಎಂದು ಅಸಮಾಧಾನಗೊಂಡಿರುವ ತಮಿಳುನಾಡು ಸರ್ಕಾರ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್ ಬಳಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ.

Cauvery Verdict, Cauvery Management Board, Supreme Court

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ