ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀತಿ ಸಂಹಿತೆ ಉಲ್ಲಂಘಿಸಿ ಕೆಲವೆಡೆ ಗ್ರಾಮಸ್ಥರಿಗೆ ಹಣ ನೀಡಿದ್ದಾರೆ ?

ಮೈಸೂರು, ಮಾ.31- ಇಂದು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪ್ರಚಾರ ನಡೆಸುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀತಿ ಸಂಹಿತೆ ಉಲ್ಲಂಘಿಸಿ ಕೆಲವೆಡೆ ಗ್ರಾಮಸ್ಥರಿಗೆ ಹಣ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಇಂದು ಬೆಳಗ್ಗೆ ಮೈಸೂರಿನಿಂದ ನೇರವಾಗಿ ತಮ್ಮ ಚಾಮುಂಡೇಶ್ವರಿ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಆರತಿ ತಟ್ಟೆ ಹಿಡಿದು ಬಂದ ಕೆಲವರಿಗೆ 2,000 ಹಾಗೂ 500 ನೋಟುಗಳನ್ನೂ ನೀಡಿದ್ದಾರೆ. ಇದು ಸ್ಪಷ್ಟ ನೀತಿ ಸಂಹಿತೆ ಉಲ್ಲಂಘನೆ ಮತ್ತು ಮತದಾರರಿಗೆ ಆಮಿಷ ಒಡ್ಡುವ ತಂತ್ರ ಎಂದು ಬಿಜೆಪಿ ಹಾಗೂ ಜೆಡಿಎಸ್‍ನ ಕೆಲ ಮುಖಂಡರು ಆರೋಪಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ದುಡ್ಡು ನೀಡುತ್ತಿರುವ ದೃಶ್ಯಗಳನ್ನು ಕೆಲವು ಆಂಗ್ಲ ಮಾಧ್ಯಮಗಳು ಬಿತ್ತರಿಸುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲೂ ಕೂಡ ವೈರಲ್ ಆಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ