ಬೆಂಗಳೂರು, ಮಾ.31- ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ಗಾಗಿ ಭರ್ಜರಿ ಪೈಪೆÇೀಟಿ ಏರ್ಪಟ್ಟಿದ್ದು , ಈ ಬಾರಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಎಸ್. ಪ್ರಕಾಶಂ ಅವರು ಅಸಂಘಟಿತ ಕಾರ್ಮಿಕರ ವಲಯದಿಂದ ಟಿಕೆಟ್ ನೀಡಬೇಕೆಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಲ್ಲಿ ಮನವಿ ಮಾಡಿದ್ದಾರೆ.
ಕ್ಷೇತ್ರದಲ್ಲಿ ಅಸಂಘಟಿತ ಕಾರ್ಮಿಕರ ದೊಡ್ಡ ಪಡೆಯೇ ಇದ್ದು ಅವರ ಕಷ್ಟ ಸುಖಗಳಿಗೆ ಕೆಪಿಸಿಸಿ ಕಾರ್ಮಿಕರ ವಿಭಾಗದಿಂದ ಸ್ಪಂದಿಸಲಾಗಿದೆ. ಇದಲ್ಲದೆ ಸುಮಾರು 12 ಲಕ್ಷಕ್ಕೂ ಹೆಚ್ಚು ಸದಸ್ಯರನ್ನು ನೊಂದಾಯಿಸಿ ಪಕ್ಷ ಸಂಘಟನೆಯಲ್ಲಿ ತೊಡಗಿರುವ ಪ್ರಕಾಶಂ ಅವರಿಗೆ ಈ ಬಾರಿ ಸ್ಪರ್ಧೆಗೆ ಅವಕಾಶ ಸಿಗಲಿದೆ ಎಂಬ ದೃಢ ವಿಶ್ವಾಸವಿದೆ ಎಂದು ಕಾಂಗ್ರೆಸ್ನ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ.
ಇತ್ತೀಚೆಗೆ ನವದೆಹಲಿಯಲ್ಲಿ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಐಎನ್ಟಿಯುಸಿನ ರಾಷ್ಟ್ರೀಯ ಅಧ್ಯಕ್ಷರು ಜತೆಯಲ್ಲಿ ಚರ್ಚೆ ನಡೆದಿದ್ದು, ಸ್ಪರ್ಧಿಸುವ ಅವಕಾಶ ತಮಗೆ ಸಿಗುವ ದೃಢ ವಿಶ್ವಾಸ ನನಗಿದೆ ಎಂದು ಪ್ರಕಾಶಂ ಅವರು ಹೇಳಿದ್ದಾರೆ.
ಬೀದಿ ಬದಿ ವ್ಯಾಪಾರಿಗಳು, ವಾಹನ ಚಾಲಕರು, ಕಟ್ಟಡ ನಿರ್ಮಾಣ ಕಾರ್ಮಿಕರು ಸೇರಿದಂತೆ ಅಸಂಘಟಿತ ಕಾರ್ಮಿಕ ವಲಯದಲ್ಲಿ ಸಾಕಷ್ಟು ಅನುದಾನವಿದ್ದರೂ ಅದರ ಬಳಕೆಯಾಗುತ್ತಿಲ್ಲ. ಇದರ ಬಗ್ಗೆ ದನಿ ಎತ್ತಿ ಅದರ ಬಗ್ಗೆ ಜಾಗೃತಿ ಮೂಡಿಸಿದ್ದೇನೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ದುಡಿದು ಕಳೆದ ಹಲವು ವರ್ಷಗಳಿಂದ ರಾಜೀವ್ ಜ್ಯೋತಿ ಯಾತ್ರೆ ಮೂಲಕ ಹೊಸ ಮುನ್ನುಡಿ ಬರೆದು ಪಕ್ಷಕ್ಕಾಗಿ ಸದಾ ದುಡಿಯುವ ನನಗೆ ಟಿಕೆಟ್ ನೀಡಿದರೆ ಖಂಡಿತವಾಗಿಯೂ ಜನರ ಆಶೀರ್ವಾದ ಮಾಡುತ್ತಾರೆ ಎಂಬ ನಂಬಿಕೆ ಇದೆ ಎಂದು ಹೇಳಿದ್ದಾರೆ.
ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸಲು ಮಾಜಿ ಮೇಯರ್ ಜಿ.ಪದ್ಮಾವತಿ, ಮಂಜುಳಾನಾಯ್ಡು , ಮಂಜುನಾಥ ಗೌಡ, ಎಸ್.ಮನೋಹರ್ ಸೇರಿದಂತೆ ಹಲವರು ಅರ್ಜಿ ಸಲ್ಲಿಸಿದ್ದಾರೆ. ಅಂತಿಮವಾಗಿ ದೆಹಲಿಯಲ್ಲಿ ನಡೆಯಲಿರುವ ಸ್ಕ್ರೀನಿಂಗ್ ಕಮಿಟಿಯಲ್ಲಿ ತಮಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಇಡೀ ರಾಜ್ಯದಲ್ಲಿ ಕಾರ್ಮಿಕ ವಲಯದಿಂದ ಸ್ಪರ್ಧಿಸುವ ಅವಕಾಶ ಸಿಕ್ಕಿಲ್ಲ. ರಾಷ್ಟ್ರೀಯ ವರಿಷ್ಠರು ಪರಿಗಣಿಸುತ್ತಾರೆ ಎನ್ನುವ ಅಚಲ ನಂಬಿಕೆ ಎಂದು ಪ್ರಕಾಶಂ ತಿಳಿಸಿದ್ದಾರೆ.