ವರದಕ್ಷಿಣೆ ಕಿರುಕುಳ: ಪತಿಯೇ ತನ್ನ ಸ್ನೇಹಿತನಿಂದ ಪತ್ನಿಯ ಮೇಲೆ ಅತ್ಯಾಚಾರ ಮಾಡಿಸಿದ್ದಾನೆ!

ಲಕ್ನೋ,ಮಾ.31- ವರದಕ್ಷಿಣೆ ನೀಡಿಲ್ಲ ಎಂಬ ಕಾರಣಕ್ಕೆ ಪತಿಯೇ ತನ್ನ ಸ್ನೇಹಿತನಿಂದ ಪತ್ನಿಯ ಮೇಲೆ ಅತ್ಯಾಚಾರ ಮಾಡಿಸಿರುವ ಘಟನೆ ಬರೇಲಿ ಜಿಲ್ಲೆಯಲ್ಲಿ ನಡೆದಿದೆ. ಮದುವೆ ನಂತರ ವರದಕ್ಷಿಣೆ ವಿಚಾರಕ್ಕೆ ಪತಿ ಹಾಗೂ ಆತನ ಮನೆಯವರು ಮಹಿಳೆಗೆ ಕಿರುಕುಳ ನೀಡುತ್ತಿದ್ದರು. ಕಳೆದ ಒಂದು ತಿಂಗಳಿಂದ ಪತಿ ತನ್ನ ಸ್ನೇಹಿತನ ಜೊತೆ ಸಂಬಂಧ ಬೆಳೆಸುವಂತೆ ಒತ್ತಾಯಿಸುತ್ತಿದ್ದ ಎಂದು ಹೇಳಲಾಗಿದೆ. ಇದನ್ನು ವಿರೋಧಿಸಿದ್ದಕ್ಕೆ ಪ್ರತಿದಿನ ಹೊಡೆಯುತ್ತಿದ್ದ ಪತಿ ಪತ್ನಿಯನ್ನು ಬಲವಂತವಾಗಿ ರೂಮಿಗೆ ಕಳುಹಿಸಿ ಅತ್ಯಾಚಾರ ಮಾಡಿಸಿದ್ದಾನೆ ಎಂದು ಸಂತ್ರಸ್ತೆ ಪೆÇಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ದೂರಿನನ್ವಯ ಆರೋಪಿ ಪತಿ ಹಾಗೂ ಸ್ನೇಹಿತನ್ನು ಪೆÇಲೀಸರು ಬಂಧಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ