ಇಸ್ಲಾಮಿಕ್ ರಿಸರ್ಚ್ ಫೌಂಡೇಷನ್ ಸಂಸ್ಥಾಪಕ ಡಾ. ಝಾಕಿರ್ ನಾಯ್ಕ್ ನನ್ನು ಗಡಿಪಾರು ಮಾಡುವಂತೆ ಒತ್ತಾಯ:

ನವದೆಹಲಿ, ಮಾ. 31- ವಿವಾದಾತ್ಮಕ ಧಾರ್ಮಿಕ ವಿದ್ವಾಂಸ ಹಾಗೂ ಇಸ್ಲಾಮಿಕ್ ರಿಸರ್ಚ್ ಫೌಂಡೇಷನ್ ಸಂಸ್ಥಾಪಕ ಡಾ. ಝಾಕಿರ್ ನಾಯ್ಕ್ ನನ್ನು ಭಾರತಕ್ಕೆ ಗಡೀಪಾರು ಮಾಡುವಂತೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಲೇಷ್ಯಾ ಸರ್ಕಾರಕ್ಕೆ ಪತ್ರ ಬರೆದಿದೆ. ಭಾರತದ ಮನವಿ ಬಗ್ಗೆ ಕೌಲಾಲಂಪುರ ನ್ಯಾಯಾಲಯ ವಿಚಾರಣೆ ನಡೆಸಲಿದೆ. ದೇಶದಲ್ಲಿ ಆಶ್ರಯ ಪಡೆದಿರುವ ಝಾಕಿರ್ ನಾಯ್ಕ್‍ನನ್ನು ಗಡೀಪಾರು ಮಾಡಲು ಸಿದ್ಧ ಎಂದು ಮಲೇಷ್ಯಾ ಹೇಳಿಕೆ ನೀಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಉಭಯ ದೇಶಗಳ ನಡುವಿನ ಪರಸ್ಪರ ಕಾನೂನು ನೆರವು ಒಪ್ಪಂದದ ಅನ್ವಯ ಭಾರತ ಸರ್ಕಾರ ಮನವಿ ಸಲ್ಲಿಸಿದರೆ ಝಾಕಿರ್ ನಾಯ್ಕ್ ಅವರನ್ನು ಭಾರತಕ್ಕೆ ಗಡೀಪಾರು ಮಾಡಲು ಸಿದ್ಧ ಎಂದು ಮಲೇಷ್ಯಾದ ಉಪ ಪ್ರಧಾನಿ ಅಹ್ಮದ್ ಝಾಹಿದ್ ಹಮಿದಿ 2017ರ ನವೆಂಬರ್‍ನಲ್ಲಿ ಹೇಳಿಕೆ ನೀಡಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ