ಐಎನ್ ಎಕ್ಸ್ ಮೀಡಿಯಾ ಪ್ರಕರಣ: ಉದ್ಯಮಿ ಪೀಟರ್ ಮುಖರ್ಜಿ ಏಪ್ರಿಲ್ 13ರವರೆಗೂ ನ್ಯಾಯಾಂಗ ಬಂಧನಕ್ಕೆ

ನವದೆಹಲಿ:ಮಾ-31: ಐಎನ್ ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಪೀಟರ್ ಮುಖರ್ಜಿ ಅವರನ್ನು ಏಪ್ರಿಲ್ 13ರವರೆಗೂ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಪ್ರಕರಣ ಸಂಬಂಧ ಇಂದು ವಿಚಾರಣೆ ನಡೆಸಿದ ದೆಹಲಿಯ ಪಾಟಿಯಾಲಾ ಕೋರ್ಟ್ ಈ ಸಂಬಂಧ ಆದೇಶ ನೀಡಿದ್ದು, ಆರೋಪಿ ಪೀಟರ್ ಮುಖರ್ಜಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಿದ್ದರು..

ಪೀಟರ್ ಮುಖರ್ಜಿ ಐಎನ್ ಎಕ್ಸ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಮಾಜಿ ಸಹ ನಿರ್ದೇಶಕರಾಗಿದ್ದು, ಕಿಕ್ ಬ್ಯಾಕ್ ನೀಡಿದ ಪ್ರಕರಣಕ್ಕೆ ಸಂಬಂದಿಸಿದಂತೆ ಸಿಬಿಐ ಇವರ ವಿರುದ್ಧ ತನಿಖೆ ನಡೆಸುತ್ತಿದೆ. ಮೂಲಗಳ ಪ್ರಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಪೀಟರ್ ಮುಖರ್ಜಿ ವಿಚಾರಣೆಗೆ ಸಹಕಿರಿಸುತ್ತಿಲ್ಲ ಎಂದು ಸಿಬಿಐ ಅಧಿಕಾರಿಗಳು ನ್ಯಾಯಾಲಯದ ಮುಂದೆ ಹೇಳಿದ್ದು, ಇದೇ ಕಾರಣಕ್ಕೆ ಕಾರ್ತಿ ಚಿದಂಬಂರಂ ವಿರುದ್ಧ ಆರೋಪಗಳನ್ನು ಸಾಬೀತು ಪಡಿಸಲು ಸಾಧ್ಯವಾಗಿಲ್ಲ ಎಂದು ಸಿಬಿಐ ನ್ಯಾಯಾಧೀಶರ ಮುಂದೆ ಹೇಳಿದೆ.

ಈಗಾಗಲೇ ಶೀನಾ ಬೋರಾ ಹತ್ಯೆ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ಪೀಟರ್ ಮುಖರ್ಜಿ, ಐಎನ್ ಎಕ್ಸ್ ಮೀಡಿಯಾ ಪ್ರಕರಣದಲ್ಲೂ ಪ್ರಮುಖ ಆರೋಪಿಯಾಗಿದ್ದಾರೆ. ಇದೇ ಪ್ರಕರಣದ ಮತ್ತೋರ್ವ ಆರೋಪಿ ಕಾರ್ತಿ ಚಿದಂಬರಂ ಅವರಿಗೆ ಪೀಟರ್ ಸುಮಾರು 3.5 ಕೋಟಿ ರೂ ಕಿಕ್ ಬ್ಯಾಕ್ ನೀಡಿದ ಆರೋಪ ಎದುರಿಸುತ್ತಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ