ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿಪಿಐ(ಎಂ) ನಿರ್ಧಾರ

ನವದೆಹಲಿ:ಮಾ-31:  ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಬೆಂಬಲ ವ್ಯಕ್ತ ಪಡಿಸಿರುವ ಸಿಪಿಐ(ಎಂ) ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ, ಹೀಗಾಗಿ 18 ಮತ್ತು 19 ಕ್ಷೇತ್ರಗಳಲ್ಲಿ ತನ್ನದೇ ಆದ ಅಭ್ಯರ್ಥಿಗಳನ್ನು  ಕಣಕ್ಕಿಳಿಸಲು ತೀರ್ಮಾನಿಸಿದೆ.

ಪಕ್ಷದ ಕೇಂದ್ರ ಸಮಿತಿಯ  ಎರಡು ದಿನಗಳ ಸಭೆಯ ನಂತರ ಮಾತನಾಡಿದ, ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ ಯೆಚೂರಿ ಕೋಮು ಶಕ್ತಿಗಳನ್ನು ತಡೆಯಲು ಬಿಜೆಪಿ ಸೋಲಿಸಲು ಕರೆ ನೀಡಿದ್ದಾರೆ.

ಈ ಚುನಾವಣೆಯಲ್ಲಿ ಬಿಜೆಪಿ ಸೋಲಿಸುವುದು ಪ್ರಮುಖ ಗುರಿಯಾಗಿದೆ, ನಾವು ಸ್ಪರ್ದಿಸುವ ಕ್ಷೇತ್ರಗಳನ್ನು ಹೊರತು ಪಡಿಸಿ ಉಳಿದೆಡೆ ಬಿಜೆಪಿ ವಿರುದ್ಧ ನಿಲ್ಲುವ ಅಭ್ಯರ್ಥಿಗಳಿಗೆ ಬೆಂಬಲ ನೀಡುವುದಾಗಿ ತಿಳಿಸಿದೆ,

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ದಿಸುವ ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರವೇ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ, ಆದರೆ ಯಾವ ನಿರ್ಧಿಷ್ಟ ಪಕ್ಷಕ್ಕೆ ಬೆಂಬಲ ನೀಡುತ್ತೇವೆ ಎಂಬುದನ್ನು ಸ್ಪಷ್ಟಪಡಿಸಿಲ್ಲ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ