
ಅಲಹಾಬಾದ್:ಮಾ-31: ಕಳೆದ ಕೆಲ ದಿನಗಳ ಹಿಂದೆ ಪೆರಿಯಾರ್ ಹಾಗೂ ಲೆನಿನ್ ಪ್ರತಿಮೆ ವಿರೂಪಗೊಳಿಸಿದ್ದ ಪ್ರಕರಣ ದೇಶಾದ್ಯಂತ ಬಾರಿ ಚರ್ಚೆಗೆ ಗ್ರಾಸವಾಗಿದ್ದವು. ಇದರ ಮಧ್ಯೆ ಅಲಹಾಬಾದ್‌ನಲ್ಲಿ ಅಂತಹ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.
ಇಲ್ಲಿನ ಟ್ರಾನ್ಸ್ ಗಂಗಾ ಪ್ರದೇಶದಲ್ಲಿನ ಡಾ. ಅಂಬೇಡ್ಕರ್ ಪ್ರತಿಮೆಯನ್ನು ಕೆಲ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ತ್ರಿವೇಣಿಪುರಂನಲ್ಲಿರುವ ಅಂಬೇಡ್ಕರ್ ಪ್ರತಿಮೆಯ ಮೇಲಿನ ಭಾಗ ಸಂಪೂರ್ಣವಾಗಿ ಧ್ವಂಸಗೊಳಿಸಲಾಗಿದ್ದು, ಘಟನೆ ಗೊತ್ತಾಗುತ್ತಿದ್ದಂತೆ ಪೊಲೀಸರು ಸ್ಥಳಕ್ಕಾಗಮಿಸಿ ಭಾರೀ ಪೊಲೀಸ್ ಬಿಗಿ ಭದ್ರತೆ ನೀಡಿದ್ದಾರೆ.
ಕೆಲವರು ಪ್ರತಿಭಟನೆ ನಡೆಸುತ್ತಿದ್ದಂತೆ ಸ್ಥಳೀಯ ಅಧಿಕಾರಿಗಳು ಬೇರೊಂದು ಪ್ರತಿಮೆ ಸ್ಥಾಪಿಸುವುದಾಗಿ ಭರವಸೆ ನೀಡಿದ್ದಾರೆ.