ಚೆನ್ನೈ:ಏ-೧: ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಆಗ್ರಹಿಸಿ ಡಿಎಂಕೆ ಪಕ್ಷ ಏಪ್ರಿಲ್ 5ರಂದು ತಮಿಳುನಾಡು ಬಂದ್ ಗೆ ಕರೆ ನೀಡಿದೆ ಎಂದು ಡಿಎಂ ಕೆ ಮುಖ್ಯಸ್ಥ ಎಂ ಕೆ ಸ್ಟಾಲಿನ್ ತಿಳಿಸಿದ್ದಾರೆ.
ಚೆನ್ನೈನಲ್ಲಿ ಎಂಕೆ ಸ್ಟಾಲಿನ್ ನೇತೃತ್ವದಲ್ಲಿ ಇಂದು ಸರ್ವಪಕ್ಷಗಳ ಸಭೆ ನಡೆದಿದ್ದು, ಸುಮಾರು ಒಂದು ಗಂಟೆಗೂ ಅಧಿಕ ಸಮಯ ನಡೆದ ಸಭೆಯಲ್ಲಿ ಕಾವೇರಿ ವಿಚಾರವಾಗಿ ಚರ್ಚೆ ನಡೆಸಲಾಯಿತು. ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್, ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಆಗ್ರಹಿಸಿ ಇದೇ ಏಪ್ರಿಲ್ 5ರಂದು ತಮಿಳುನಾಡಿನಾದ್ಯಂತ ಬಂದ್ ಘೋಷಣೆ ಮಾಡಲಾಗಿದೆ ಎಂದಿದ್ದಾರೆ.
ನಾವು ಕರೆ ನೀಡಿರುವ ಬಂದ್ ಗೆ ಆಡಳಿತಾ ರೂಢ ಎಐಎಡಿಎಂಕೆ ಪಕ್ಷ ಕೂಡ ಬೆಂಬಲ ನೀಡಬೇಕು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡುವ ಮೂಲಕ ನಮ್ಮ ಪ್ರತಿಭಟನೆ ವ್ಯಕ್ತಪಡಿಸಲಾಗುತ್ತದೆ. ತಮಿಳುನಾಡಿಗೆ ಯಾವುದೇ ಕೇಂದ್ರ ಸಚಿವರು ಭೇಟಿ ನೀಡಿದರೂ ಅವರಿಗೆ ನಮ್ಮ ಪಕ್ಷದ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶನ ಮಾಡಲಿದ್ದಾರೆ ಎಂದು ಸ್ಟಾಲಿನ್ ಹೇಳಿದ್ದಾರೆ.
Cauvery row, DMK calls, Tamil Nadu bandh,on April 5