ಬೆಂಗಳೂರು, ಏ.1-ಹನ್ನೆರಡನೇ ಶತಮಾನದ ಸಮಾಜ ಸುಧಾರಕ ಜಗಜ್ಜ್ಯೋತಿ ಬಸವೇಶ್ವರರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಆದೇಶಿಸಿದೆ.
ಏ.29 ರಂದು ಬಸವ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಜಗಜ್ಜ್ಯೋತಿ ಬಸವೇಶ್ವರರ ಭಾವಚಿತ್ರವನ್ನು ಎಲ್ಲಾ ಸರ್ಕಾರಿ ಕಚೇರಿಗಳನ್ನು ಕಡ್ಡಾಯವಾಗಿ ಪ್ರದರ್ಶಿಸಲು ರಾಜ್ಯಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆ ಹೊರಡಿಸಿದೆ.
ಸರ್ಕಾರಿ ಕಚೇರಿಗಳಲ್ಲಿ ಬಸವ ಜಯಂತಿಯನ್ನು ಪ್ರತಿವರ್ಷದಂತೆ ಈ ವರ್ಷವೂ ಆಚರಿಸಬೇಕು. ವಚನಗಳ ಮೂಲಕ ಮೂಢನಂಬಿಕೆ, ಕಂದಾಚಾರ ಹಾಗೂ ಸಮಾಜದ ಲೋಪದೋಷಗಳನ್ನು ತಿದ್ದುವಲ್ಲಿ ಬಹುವಾಗಿ ಬಸವಣ್ಣ ಅವರು ಶ್ರಮಿಸಿದ್ದಾರೆ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಿದ್ದಾರೆ.