ಮಹಿಳೆಯರು ರಾಜಕೀಯ ಕ್ಷೇತ್ರದಲ್ಲೂ ಹೆಚ್ಚು ಸಕ್ರಿಯರಾಗುª ಮೂಲಕ ಪ್ರಬಲರಾಗಿ ಬೆಳೆಯಬೇಕು: ಗೃಹ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು, ಏ.1- ಮಹಿಳೆಯರು ರಾಜಕೀಯ ಕ್ಷೇತ್ರದಲ್ಲೂ ಹೆಚ್ಚು ಸಕ್ರಿಯರಾಗುª ಮೂಲಕ ಪ್ರಬಲರಾಗಿ ಬೆಳೆಯಬೇಕು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಕರೆ ನೀಡಿದರು.
ಸ್ಪಂದನ ಕ್ರೀಡಾ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ನಗರದ ನಾಗಪುರದ ಡಾ.ರಾಜ್‍ಕುಮಾರ್ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆಯಲ್ಲಿ ಮಹಿಳಾ ಸಾಧಕರಿಗೆ ಸನ್ಮಾನ ಮಾಡಿ ಮಾತನಾಡಿದರು.

ಮಾಜಿ ಸಿಎಂ ದಿ.ರಾಮಕೃಷ್ಣ ಹೆಗಡೆ ಅವರ ಕಾಲದಲ್ಲಿ ಮಹಿಳೆಯರಿಗೆ ಶೇ.18ರಷ್ಟು ಮೀಸಲಾತಿ ಜಾರಿಗೆ ಬಂದಿತ್ತು. ನಂತರ ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಅವರ ಕಾಲದಲ್ಲಿ ಆ ಮೀಸಲಾತಿ ಶೇ.33ರಷ್ಟು ಹೆಚ್ಚಳವಾಯಿತು. ಹೀಗೆ ಎಲ್ಲ ಕ್ಷೇತ್ರದಲ್ಲೂ ಅವರಿಗೆ ಮೀಸಲಾತಿ ಕಲ್ಪಿಸಲಾಯಿತು. ರಾಜಕೀಯದಲ್ಲೂ ದೊರೆತ ಅವಕಾಶ ಬಳಸದಿಕೊಂಡು ಮಹಿಳೆಯರು ಮತ್ತಷ್ಟು ಉತ್ತುಂಗಕ್ಕೆ ಏರಬೇಕು ಎಂದು ಕಿವಿಮಾತು ಹೇಳಿದರು.
ಈ ಹಿಂದೆ ಪುರುಷರಿಗೆ ಸರಿಸಮನಾಗಿ ಕೆಲಸ ಮಾಡಿದ ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿ ಅವರನ್ನು ಇಡೀ ವಿಶ್ವವೇ ಮೆಚ್ಚಿತ್ತು. ಅದೇ ರೀತಿ ಶ್ರೀಲಂಕಾದ ಸಿರಿಮಾವೋ ಬಂಡಾರೆ ನಾಯ್ಕೆ, ಬೆನಜೀರ್ ಬುಟ್ಟೋ, ಇಂದಿನ ಸರಕಾರದಲ್ಲೂ ಮುಖ್ಯ ಕಾರ್ಯದರ್ಶಿ ರತ್ನ ಪ್ರಭಾ, ಪೆÇಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಸೇರಿದಂತೆ ಸಾಕಷ್ಟು ಮಂದಿ ಇದ್ದಾರೆ ಎಂದು ಹೇಳಿದರು.

ಸಚಿವ ಎಚ್.ಎಂ.ರೇವಣ್ಣ ಮಾತನಾಡಿ, ಸಾರಿಗೆ ಇಲಾಖೆಯಲ್ಲೂ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಅದೇ ರೀತಿ ಮೀಸಲಾತಿ ಸಹ ಕಲ್ಪಿಸಲಾಗಿದೆ ಎಂದರು.
ಇದೇ ವೇಳೆ ನಾಡೋಜ ಡಾ.ಸಾಲುಮರದ ತಿಮ್ಮಕ್ಕ, ಸಾಹಿತಿ ಎಂ.ಆರ್.ಕಮಲಾ, ಕಲಾವಿದರಾದ ಸತ್ಯಭಾಮ, ಪ್ರಜಾಪಿತ ಬ್ರಹ್ಮಕುಮಾರಿ ಬಿ.ಕೆ.ಪಾರ್ವತಕ್ಕ, ಸಮಾಜ ಸೇವಕರಾದ ಸುಲೋಚನಾ ಎಸ್.ಗುಜ್ಜಾರ್, ಡಾ.ವನಜಾ ಶಿವಕುಮಾರ್ ಅವರಿಗೆ ಸ್ಪಂದನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ವೇದಿಕೆ ಅಧ್ಯಕ್ಷ ಎಂ.ಶಿವರಾಜು, ಪ್ರಧಾನ ಕಾರ್ಯದರ್ಶಿ ವಿಶಾಲಾಕ್ಷಿ ಶಿವರಾಜು ಮತ್ತಿತರರು ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ