ಬೆಂಗಳೂರು, ಏ.1- ಜೀವನದಲ್ಲಿ ಜಿಗುಪ್ಸೆಗೊಂಡ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಸವೇಶ್ವರನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬಸವೇಶ್ವರನಗರದ 3ನೆ ಮುಖ್ಯರಸ್ತೆ, 1ನೆ ಬ್ಲಾಕ್ ನಿವಾಸಿ ನಾಗರತ್ನ (34) ಮೃತಪಟ್ಟ ಮಹಿಳೆ. ಮನೆಯವರು ಹೊರಗೆ ಹೋಗಿದ್ದಾಗ ನಾಗರತ್ನ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನೆರೆಹೊರೆಯವರು ಇದನ್ನು ಗಮನಿಸಿ ಪೆÇಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೆÇಲೀಸರು ಪರಿಶೀಲನೆ ನಡೆಸಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.