ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ: ಸುಪ್ರೀಂಕೋರ್ಟ್ ಏ.9ರಂದು ವಿಚಾರಣೆ

ನವದೆಹಲಿ, ಏ.2- ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚಿಸದಿರುವುದಕ್ಕಾಗಿ ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡು ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ಕುರಿತು ಸುಪ್ರೀಂಕೋರ್ಟ್ ಏ.9ರಂದು ವಿಚಾರಣೆ ನಡೆಸಲಿದೆ.
ಸದ್ಯ ಪರಿಸ್ಥಿತಿಯಲ್ಲಿ ಮಂಡಳಿ ರಚನೆ ಕಷ್ಟ ಸಾಧ್ಯ. ಮತ್ತು ತೀರ್ಪಿನಲ್ಲಿ ಸ್ಕೀಂ ಬಗ್ಗೆ ಸರಿಯಾದ ವಿವರಣೆಗಳಿಲ್ಲ ಮತ್ತು ಕರ್ನಾಟಕ, ತಮಿಳುನಾಡು ರಾಜ್ಯಗಳು ವಿಭಿನ್ನ ರೀತಿಯಲ್ಲಿ ಪತ್ರಗಳನ್ನು ಬರೆದಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‍ಗೆ ಅಫಿಡವಿಟ್ ಸಲ್ಲಿಸಿದೆ.
ಈ ನಡುವೆ ತಮಿಳುನಾಡು ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ಕುರಿತು ವಿಚಾರಣೆಯನ್ನು ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹಾಗೂ ನ್ಯಾಯಮೂರ್ತಿಗಳಾದ ಎ.ಎಂ.ಕಾನ್ವಿಲ್‍ಕರ್ ಮತ್ತು ಡಿ.ವೈ.ಚಂದ್ರಚೂಡ್ ಅವರನ್ನು ಒಳಗೊಂಡ ಪೀಠವು ಅದನ್ನು ಏ.9ಕ್ಕೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ