ಎಂಬಿಬಿಎಸ್ ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿಗ¼ನ್ನು ಮಾಡಬೇಕಾದರೆ ಕಡ್ಡಾಯವಾಗಿ ಮೂರು ವರ್ಷ ಗ್ರಾಮೀಣ ಸೇವೆ ಸಲ್ಲಿಸಬೇಕು: ರಾಜ್ಯ ಸರ್ಕಾgದ ಹೊಸ ನಿಯಮ

ಬೆಂಗಳೂರು,ಏ.2-ವೈದ್ಯರಿಗೆ ಗ್ರಾಮೀಣ ಸೇವೆ ಕಡ್ಡಾಯಗೊಳಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಇದೀಗ ಮತ್ತೊಂದು ಹೊಸ ನಿಯಮವನ್ನು ಜಾರಿ ಮಾಡಿದೆ.
ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುವ ಎಂಬಿಬಿಎಸ್ ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿಗಳಾದ(ಪಿಜಿ) ಎಂ.ಡಿ, ಎಂ.ಎಸ್ ಸೇರಿದಂತೆ ಇತರೆ ಕೋರ್ಸ್‍ಗಳನ್ನು ಮಾಡಬೇಕಾದರೆ ಕಡ್ಡಾಯವಾಗಿ ಮೂರು ವರ್ಷ ಗ್ರಾಮೀಣ ಸೇವೆ ಸಲ್ಲಿಸಲೇಬೇಕಾಗುತ್ತದೆ.

ಈ ಸಂಬಂಧ ಕರ್ನಾಟಕ ವೈದ್ಯಕೀಯ ಪರೀಕ್ಷಾ ಪ್ರಾಧಿಕಾರ(ಕೆಇಎ) ಅಧಿಸೂಚನೆ ಹೊರಡಿಸಿದ್ದು , ಇನ್ನು ಮುಂದೆ ಸ್ನಾತಕೋತ್ತರ ಪದವಿ ಪಡೆಯುವ ವಿದ್ಯಾರ್ಥಿಗಳು ಗ್ರಾಮೀಣ ಭಾಗದಲ್ಲಿ ಮೂರು ವರ್ಷ ಸೇವೆ ಸಲ್ಲಿಸುತ್ತೇವೆ ಎಂದು ಅಫಿಡವಿಟ್ ಸಲ್ಲಿಸಬೇಕು.
ವೆಬ್‍ಸೈಟ್‍ನಲ್ಲಿ ಕೆಇಎ ಹೊರಡಿಸಿರುವ ಅಧಿಸೂಚನೆಯಂತೆ ಎಂಬಿಬಿಎಸ್ ಸೇರುವ ಪ್ರಾರಂಭದಲ್ಲೇ ವಿದ್ಯಾರ್ಥಿಗಳು ಈ ಕರಾರು ಒಪ್ಪಂದಕ್ಕೆ ಸಹಿ ಹಾಕಬೇಕು.
ಗ್ರಾಮೀಣ ಸೇವೆ ಜೊತೆಗೆ ನಾವು ಪಿಜಿ ಕೋರ್ಸ್ ಪಡೆದರೆ ಮೂರು ವರ್ಷ ಗ್ರಾಮೀಣ ಭಾಗದಲ್ಲಿ ವೈದ್ಯಕೀಯ ಸೇವೆ ಸಲ್ಲಿಸುತ್ತೇವೆ. ಪ್ರವೇಶ ಪಡೆದ ದಿನಾಂಕದಂತೆ ಸಹಿ ಹಾಕಿದರೆ ಮಾತ್ರ ಎಂಬಿಬಿಎಸ್‍ಗೆ ಪ್ರವೇಶ ಸಿಗುತ್ತದೆ. ಇಲ್ಲದಿದ್ದರೆ ಯಾವುದೇ ಕಾರಣಕ್ಕೂ ಪ್ರವೇಶಾತಿ ಸಿಗುವುದಿಲ್ಲ.
ಸರ್ಕಾರಿ ಕಾಲೇಜುಗಳಲ್ಲಿ ಕೋಟಾದಡಿ ಸೀಟು ಪಡೆಯುವವರಿಗೆ ಮಾತ್ರ ಈ ನಿಯಮ ಅನ್ವಯವಾಗುತ್ತದೆ. ಖಾಸಗಿ ಕಾಲೇಜುಗಳಿಗೆ ಇದು ಅನ್ವಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ರಾಜ್ಯದ ಎಲ್ಲ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಜಾರಿಗೆ ಬರಲಿದೆ.
ಕಾರಣವೇನು:
ಈ ಹಿಂದೆ ರಾಜ್ಯ ಸರ್ಕಾರ ಎಂಬಿಬಿಎಸ್ ವ್ಯಾಸಂಗ ಮುಗಿಸಿದ ವಿದ್ಯಾರ್ಥಿಗಳು ಕಡ್ಡಾಯವಾಗಿ ಐದು ವರ್ಷ ಗ್ರಾಮೀಣ ಸೇವೆಯನ್ನು ಸಲ್ಲಿಸಬೇಕೆಂದು ನಿಯಮ ಮಾಡಿತ್ತು. ಈಗಾಗಲೇ ಇದು ಅನುಷ್ಠಾನದಲ್ಲಿದೆ.

ಇನ್ನು ಎಂಬಿಬಿಎಸ್ ಜೊತೆಗೆ ಎಂ.ಎಸ್, ಎಂ.ಡಿ ಸೇರಿದಂತೆ ಮತ್ತಿತರ ಕೋರ್ಸ್‍ಗಳನ್ನು ಪೂರ್ಣಗೊಳಿಸಿದ ವೈದ್ಯರು ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸಲು ಹಿಂದೇಟು ಹಾಕುತ್ತಿದ್ದರು.
ಗ್ರಾಮೀಣ ಪ್ರದೇಶದಲ್ಲೂ ಉತ್ತಮ ವೈದ್ಯಕೀಯ ಸೇವೆ ಒದಗಿಸುವ ಸದುದ್ದೇಶದಿಂದಲೇ ಸರ್ಕಾರ ಈ ನಿಯಮವನ್ನು ಜಾರಿ ಮಾಡಿದೆ. ಹಾಲಿ ಇರುವ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ.
ಈ ವರ್ಷ ಪಿಯುಸಿ ಪರೀಕ್ಷೆ ಮುಗಿಸಿ ಎಂಬಿಬಿಎಸ್ ವ್ಯಾಸಂಗ ಮಾಡಲು ಮುಂದಾಗಿರುವ ವಿದ್ಯಾರ್ಥಿಗಳಿಗೆ ಇದು ಅನ್ವಯವಾಗಲಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ