ಬೆಂಗಳೂರು, ಏ.2- ಚುನಾವಣಾ ಪ್ರಚಾರ ಸಭೆಗಳಲ್ಲಿ ಆರ್ಕೆಸ್ಟ್ರಾ, ನೃತ್ಯ, ನಂಗಾನಾಚ್ನಂತಹ ಕಾರ್ಯಕ್ರಮಗಳನ್ನು ಆಯೋಜಿಸಿದರೆ ಸಂಘಟಕರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ರಾಜ್ಯ ಪೆÇಲೀಸ್ ಮಹಾನಿರ್ದೇಶಕರಾದ ನೀಲಮಣಿ ಎನ್.ರಾಜು ಎಚ್ಚರಿಕೆ ನೀಡಿದ್ದಾರೆ.
ಕೋರಮಂಗಲದ ಕೆಎಸ್ಆರ್ಪಿ ಮೈದಾನದಲ್ಲಿ ನಡೆದ ಪೆÇಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು ರಾಜ್ಯ ಪೆÇಲೀಸರ ಉದ್ದೇಶ. ಈ ನಿಟ್ಟಿನಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದರು.
ಚುನಾವಣಾ ಪ್ರಚಾರ ಸಭೆಗಳಲ್ಲಿ ನೀತಿ ಸಂಹಿತೆ ಆಧರಿಸಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಅದನ್ನು ಹೊರತುಪಡಿಸಿ ಅತಿರೇಕದ ಕಾರ್ಯಕ್ರಮಗಳಿಗೆ ಅವಕಾಶ ಕೊಟ್ಟರೆ ನಿಯಮಾನುಸಾರ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
ವಾದ್ಯಗೋಷ್ಠಿಗಳು, ಅಶ್ಲೀಲ ನೃತ್ಯಗಳನ್ನು ನಡೆಸಲು ಅವಕಾಶ ನೀಡದಂತೆ ಸ್ಥಳೀಯ ಪೆÇಲೀಸರಿಗೆ ಸೂಚನೆ ನೀಡಲಾಗಿದೆ ಎಂದರು.
ಚುನಾವಣೆಯ ನೀತಿ ಸಂಹಿತೆಯನ್ನು ಪಾಲಿಸಲು ಪೆÇಲೀಸರು ದಕ್ಷತೆಯಿಂದ ಕೆಲಸ ಮಾಡಬೇಕು. ಕಾನ್ಸ್ಟೇಬಲ್ಗಳಿಂದ ಉನ್ನತಾಧಿಕಾರಿಗಳೆಲ್ಲರೂ ನಿಷ್ಪಕ್ಷಪಾತವಾಗಿ ಕೆಲಸ ಮಾಡಬೇಕು. ನೀತಿ ಸಂಹಿತೆಗೆ ಅವಕಾಶ ಮಾಡಿಕೊಟ್ಟರೆ ಮುಲಾಜಿಲ್ಲದೆ ಪೆÇಲೀಸರ ವಿರುದ್ಧವೇ ಕ್ರಮ ಜರುಗಿಸಬೇಕಾಗುತ್ತದೆ. ಚುನಾವಣೆ ಅಕ್ರಮಗಳಲ್ಲಿ ಪೆÇಲೀಸರು ನೆರವಾಗಿದ್ದು ಕಂಡುಬಂದರೆ ಇಲಾಖೆ ವಿಚಾರಣೆಯನ್ನು ಕಾಯ್ದಿರಿಸಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಚುನಾವಣೆ ಅತ್ಯಂತ ಸೂಕ್ಷ್ಮ ಸಂದರ್ಭವಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಎಲ್ಲರೂ ದೀಕ್ಷೆ ತೊಡಬೇಕು. ಈಗಾಗಲೇ ಹಲವಾರು ಸಭೆಗಳನ್ನು ನಡೆಸಿ ಸಲಹೆ, ಸೂಚನೆಗಳನ್ನು ನೀಡಲಾಗಿದೆ. ಚುನಾವಣಾ ಆಯೋಗದ ಜತೆಗೆ ನಿರಂತರ ಸಂಪರ್ಕದಲ್ಲಿ ಪೆÇಲೀಸ್ ಇಲಾಖೆ ಇದೆ ಎಂದು ಅವರು ತಿಳಿಸಿದರು.
ಸರ್ಕಾರದ ಮುಖ್ಯಕಾರ್ಯದರ್ಶಿ ಕೆ.ರತ್ನಪ್ರಭಾ ಅವರು ಮಾತನಾಡಿ, ಪೆÇಲೀಸರ ಕಾರ್ಯಗಳನ್ನು ಶ್ಲಾಘಿಸಿದರು.
ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ, ಅಪರಾಧ ಪ್ರಕರಣಗಳನ್ನು ಹತ್ತಿಕ್ಕಲು ಪೆÇಲೀಸರು ಹಗಲಿರುಳು ಶ್ರಮಿಸುತ್ತಿದ್ದಾರೆ. ಚುನಾವಣೆಗಳು, ಹಬ್ಬಗಳು ಹಾಗೂ ಇನ್ನಿತರೆ ಸಂದರ್ಭಗಳಲ್ಲಿ ಜನ ಹೆಚ್ಚು ಸೇರುವ ವೇಳೆ ಶಾಂತಿ ಕಾಪಾಡಲು ಪೆÇಲೀಸರು ತಮ್ಮ ಜೀವವನ್ನೂ ಲೆಕ್ಕಿಸದೆ ಕೆಲಸ ಮಾಡುತ್ತಾರೆ. ಅವರ ಶ್ರಮ ಅಮೂಲ್ಯವಾದದ್ದು ಎಂದು ಬಣ್ಣಿಸಿದರು.
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪೆÇಲೀಸ್ ಇಲಾಖೆ ಜಾಗರೂಕವಾಗಿ ಕೆಲಸ ಮಾಡುತ್ತಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ನೀತಿಸಂಹಿತೆಯನ್ನು ರಕ್ಷಿಸಲು ಪೆÇಲೀಸರು ತೆಗೆದುಕೊಂಡಿರುವ ಕ್ರಮಗಳು ಶ್ಲಾಘನೀಯ ಎಂದರು.
ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಸೇರಿದಂತೆ ಹಿರಿಯ ಪೆÇಲೀಸ್ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.