ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಭೇಟಿಯಾದ ನಟ ಸುದೀಪ್

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಭೇಟಿಯಾದ ನಟ ಸುದೀಪ್

ಬೆಂಗಳೂರು, ಏ.2-ಖ್ಯಾತ ಚಲನಚಿತ್ರ ನಟ ಸುದೀಪ್ ಅವರು ಇಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ 2 ಗಂಟೆಗೂ ಹೆಚ್ಚು ಕಾಲ ಸುದೀರ್ಘ ಚರ್ಚೆ ನಡೆಸಿದ್ದಾರೆ.

ಇಂದು ಬೆಳಗ್ಗೆ ಕುಮಾರಸ್ವಾಮಿ ಅವರ ಮನೆಗೆ ತೆರಳಿದ ಸುದೀಪ್, ಅವರೊಂದಿಗೆ ಉಪಹಾರ ಸೇವಿಸಿ ಸುದೀರ್ಘ ಮಾತುಕತೆ ನಡೆಸಿದ್ದಾರೆ.
ಈ ಬಾರಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‍ನ ತಾರಾ ಪ್ರಚಾರಕರಾಗಿ ಸುದೀಪ್ ಪ್ರಚಾರ ನಡೆಸಲಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ಮತ್ತೆ ರಾಜ್ಯದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಅಧಿಕಾರಕ್ಕೆ ಬರಬೇಕು, ಮುಖ್ಯಮಂತ್ರಿಯಾಗಬೇಕು ಎಂದು ಸುದೀಪ್ ಆಶಿಸಿದ್ದು, ಅವರ ಪ್ರಚಲಿತ ರಾಜಕೀಯ ವಿದ್ಯಮಾನಗಳು, ಚುನಾವಣೆ, ಪಕ್ಷಾಂತರ ಪರ್ವ ಸೇರಿದಂತೆ ಇನ್ನಿತರ ವಿಷಯಗಳ ಚರ್ಚೆ ನಡೆಸಿದ್ದಾರೆ.
ಈ ವೇಳೆ ಶಾಸಕ ಸಾ.ರಾ.ಮಹೇಶ್, ಅನಿತಾ ಕುಮಾರಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ