ನವದೆಹಲಿ, ಏ.3-ಕೇಂದ್ರ ಸಚಿವರಾದ ರವಿಶಂಕರ್ ಪ್ರಸಾದ್, ಪ್ರಕಾಶ್ ಜಾವಡೇಕರ್, ಜಗತ್ ಪ್ರಕಾಶ್ ನಡ್ಡಾ ಹಾಗೂ ಧರ್ಮೇಂದ್ರ ಪ್ರಧಾನ್ ಸೇರಿದಂತೆ ರಾಜ್ಯಸಭೆಗೆ ಆಯ್ಕೆಯಾದ 41 ಸದಸ್ಯರು ಇಂದು ಪ್ರಮಾಣವಚನ ಸ್ವಿಕರಿಸಿದರು.
ಕಳೆದ ತಿಂಗಳು 15 ರಾಜ್ಯಗಳಿಗೆ ನಡೆದ ಚುನಾವಣೆಗಳಲ್ಲಿ 58 ಮಂದಿ ಚುನಾಯಿತರಾಗಿದ್ದರು. ಇವರಲ್ಲಿ 33 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಇಂದು 41 ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು. ಉತ್ತರ ಪ್ರದೇಶದಿಂದ ಪುನರಾಯ್ಕೆಯಾದ ಹಣಕಾಸು ಸಚಿವ ಅರುಣ್ ಜೇಟ್ಲಿ, ರಾಜಸ್ತಾನ, ತೆಲಂಗಾಣ ಮತ್ತು ಓಡಿಶಾದಿಂದ ಚುನಾಯಿತರಾ ಸದಸ್ಯರು ಇಂದು ಪ್ರಮಾಣ ವಚನ ಸ್ವೀಕರಿಸಲಿಲ್ಲ.
ಕನ್ನಡದಲ್ಲಿ ರಾಜೀವ್ ಪ್ರಮಾಣ: ಕರ್ನಾಟಕದಿಂದ ರಾಜ್ಯಸಭೆಗೆ ಬಿಜೆಪಿಯಿಂದ ಚುನಾಯಿತರಾದ ಉದ್ಯಮಿ ರಾಜೀವ್ ಚಂದ್ರಶೇಖರ್ ಇಂದು ಸಂಸತ್ತಿನ ಮೇಲ್ಮನೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಮೂರು ಬಾರಿ ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾಗಿರುವ ಅವರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು ವಿಶೇಷವಾಗಿತ್ತು.
ರಾಜ್ಯದಿಂದ ಸಂಸತ್ ಮೇಲ್ಮನೆಗೆ ಆಯ್ಕೆಯಾದ ಕಾಂಗ್ರೆಸ್ನ್ ಎಲ್.ಹನುಮಂತಯ್ಯ, ಜಿ.ಸಿ.ಚಂದ್ರಶೇಖರ್ ಹಾಗೂ ಸಯ್ಯದ್ ನಾಸಿರ್ ಹುಸೇನ್ ಗೈರು ಹಾಜರಾಗಿದ್ದರು.