ಬೆಂಗಳೂರು, ಏ.3- ಅನಾರೋಗ್ಯದಿಂದ ಬಳಲುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಜೆಜೆ ನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪಶ್ಚಿಮ ಬಂಗಾಳ ಮೂಲದ ಸೋನಾಲಿ ಸರ್ಕಾರ್ (20) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ.
ಜೀವನ್ಭೀಮಾ ನಗರದ ವೆಂಕಟಾಲ ರಸ್ತೆ, ಮುರುಗೇಶ್ ಪಾಳ್ಯದಲ್ಲಿ ಶೀಟ್ ಮನೆಯನ್ನು ಬಾಡಿಗೆಗೆ ಪಡೆದು ಟೈಲರ್ ವೃತ್ತಿ ಮಾಡುತ್ತಿದ್ದ ಪತಿಯೊಂದಿಗೆ ಸೋನಾಲಿ ವಾಸವಾಗಿದ್ದರು.
ಕಳೆದ ಒಂದು ತಿಂಗಳ ಹಿಂದೆಯಷ್ಟೆ ಈ ದಂಪತಿ ಬೆಂಗಳೂರಿಗೆ ಬಂದು ನೆಲೆಸಿದ್ದರು. ಸೋನಾಲಿಗೆ ಆಗಾಗ್ಗೆ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಿತ್ತು ಎನ್ನಲಾಗಿದೆ. ಅನಾರೋಗ್ಯದಿಂದ ನೊಂದಿದ್ದ ಈಕೆ ನಿನ್ನೆ ಮಧ್ಯಾಹ್ನ 2.30ರಿಂದ ರಾತ್ರಿ 7.30ರ ಮಧ್ಯೆ ಮನೆಯ ಕಬ್ಬಿಣದ ಪೈಪ್ಗೆ ದುಪ್ಪಟ್ಟಾದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪತಿ ಮನೆಗೆ ಬಂದಾಗಲೇ ಸೋನಾಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಜೆಜೆ ನಗರ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.