![Kaveri_KRS](http://kannada.vartamitra.com/wp-content/uploads/2018/02/Kaveri_KRS-678x381.jpg)
ಬೆಂಗಳೂರು, ಏ.3-ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗಾಗಿ ತಮಿಳುನಾಡಿನಲ್ಲಿ ಹೋರಾಟ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೊಯಂಮತ್ತೂರು ವಲಯದ ಕೆಎಸ್ಆರ್ಟಿಸಿ ಬಸ್ಗಳನ್ನು ನಿಲ್ಲಿಸಲಾಗಿದೆ.
ಬೆಂಗಳೂರಿನಿಂದ ಕೊಯಂಮತ್ತೂರಿಗೆ ಹಗಲಿನಲ್ಲಿ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ನಿಲ್ಲಿಸಲಾಗಿದೆ. ಕರ್ನಾಟಕ ಸಾರಿಗೆಯ 10 ವೇಗದೂತ ಬಸ್ಗಳು ಮಾತ್ರ ಸಂಚರಿಸುತ್ತಿದ್ದು, ಆ ಬಸ್ಗಳ ಸಂಚಾರವೂ ಸ್ಥಗಿತವಾಗಿದೆ. ಹಗಲಿನಲ್ಲಿ ವೋಲ್ವೋ ಬಸ್ ಸಂಚಾರ ಇರಲಿಲ್ಲ ಎಂದು ಕೆಎಸ್ಆರ್ಟಿಸಿ ಮೂಲಗಳು ತಿಳಿಸಿವೆ. ಆದರೆ ರಾತ್ರಿ ಪಾಳಿಯ ಬಸ್ ಸೇವೆ ಯಥಾರೀತಿ ಮುಂದುವರೆದಿದೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.
ಚೆನ್ನೈ ಸೇರಿದಂತೆ ತಮಿಳುನಾಡಿನ ಇತರೆ ಭಾಗದ ಬಸ್ಗಳ ಸಂಚಾರದಲ್ಲಿ ಯಾವುದೇ ವ್ಯತ್ಯಯವಾಗಿಲ್ಲ ಎಂದು ಕೆಎಸ್ಆರ್ಟಿಸಿ ಮೂಲಗಳು ತಿಳಿಸಿವೆ.