ಚುನಾವಣಾ ಅಕ್ರಮ ತಡೆಯಲು ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಸೂಚನೆ: ಜಿಲ್ಲಾಧಿಕಾರಿ ಎಸ್.ಪಾಲಯ್ಯ

ಬೆಂಗಳೂರು, ಏ.3- ರಾಜ್ಯ ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆಯನ್ನು ಜಾರಿಗೊಳಿಸಲಾಗಿದ್ದು, ಚುನಾವಣಾ ಅಕ್ರಮ ತಡೆಯಲು ಕಟ್ಟುನಿಟ್ಟಿನ ಕ್ರಮಕೈಗೊಳ್ಳುವ ಮೂಲಕ ಅಗತ್ಯ ಸಿದ್ಧ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಪಾಲಯ್ಯ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಪೂರ್ವ ಸಿದ್ದತಾ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜಾರಿಗೊಂಡಿರುವ ಮಾದರಿ ನೀತಿ ಸಂಹಿತೆ ಕುರಿತು ಚುನಾವಣಾ ಆಯೋಗವು ಪ್ರತಿ ಜಿಲ್ಲೆಯಿಂದಲೂ ಮಾಹಿತಿ ಪಡೆದುಕೊಳ್ಳುತ್ತಿದ್ದು, ನಿರ್ಲಕ್ಷಿಸದೆ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.

ಜಿಲ್ಲೆಯಾದ್ಯಂತ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್, ಗೋಡೆಬರಹಗಳು ಹಾಗೂ ಪಕ್ಷಗಳ ಮತ್ತು ರಾಜಕೀಯ ವ್ಯಕ್ತಿಗಳಿಗೆ ಸಂಬಂಧಿಸಿದ ಯಾವುದೇ ಪ್ರಚಾರದ ಫೆÇೀಟೋಗಳು ಮತ್ತು ಪಕ್ಷದ ಚಿಹ್ನೆಗಳನ್ನು ಪೂರ್ಣವಾಗಿ ತೆರೆವುಗೊಳಿಸಬೇಕು. ಚೆಕ್‍ಪೆÇೀಸ್ಟ್‍ಗಳಲ್ಲಿ ವಿಚಕ್ಷಣ ದಳದ ಅಧಿಕಾರಿಗಳು ಯಾವುದೇ ಸುಳಿವು ನೀಡದೇ ಆಗಿಂದಾಗ್ಗೆ ವಾಹನಗಳ ತಪಾಸಣೆ ನಡೆಸಬೇಕು. ಯಾವುದೇ ಅಧಿಕಾರಿ ಪಕ್ಷಾತೀತವಾಗಿ ಕಾರ್ಯನಿರ್ವಹಿಸಬೇಕೆಂದು ಹೇಳಿದರು.

ನಂತರ ಜಿಲ್ಲೆಯ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಪಾಲಯ್ಯ, ಪ್ರತಿ ಹೋಬಳಿಗೂ ಇವಿಎಮ್, ವಿ.ವಿ ಪ್ಯಾಟ್ ಮತದಾನ ಯಂತ್ರಗಳನ್ನು ಪ್ರಾತ್ಯಕ್ಷಿಕೆಗಾಗಿ ನೀಡಲಾಗಿದ್ದು, ಗ್ರಾಮಗಳಲ್ಲಿ ತರಬೇತಿ ನೀಡಲಾಗುವುದು ಹಾಗೂ ರಾಜಕೀಯ ಪಕ್ಷಗಳ ಮುಖಂಡರಿಗೂ ಪ್ರಾತ್ಯಕ್ಷಿಕೆ ತರಬೇತಿ ನೀಡಲಾಗುವುದು ಎಂದರು.

ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಗುಳೇದ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್.ಲತಾ, ಅಪರ ಜಿಲ್ಲಾಧಿಕಾರಿ ಎ.ಎಂ.ಯೋಗೀಶ್, ಉಪವಿಭಾಗಧಿಕಾರಿ ರಾಜೇಂದ್ರ ಪ್ರಸಾದ್, ಉಪಕಾರ್ಯದರ್ಶಿ ಕಾಂತರಾಜು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಸೀಲ್ದಾರ್‍ಗಳು ತಾಲ್ಲೂಕಿ ಪಂಚಾಯಿತಿ ಕಾರ್ಯ ನಿರ್ವಾಹಣಾಧಿಕಾರಿಗಳು, ಪುರಸಭೆ ಮುಖ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ