![download (1)](http://kannada.vartamitra.com/wp-content/uploads/2018/04/download-1-2-678x322.jpg)
ಚೆನ್ನೈ, ಏ.3-ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಆಗ್ರಹಿಸಿ ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಇಂದು ಚೆನ್ನೈನಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದರು. ಇವರಿಗೆ ಉಪ ಮುಖ್ಯಮಂತ್ರಿ ಓ. ಪನ್ನೀರ್ ಸೆಲ್ವಂ ಹಾಗೂ ಎಐಎಡಿಎಂಕೆ ಕಾರ್ಯಕರ್ತರು ಸಾಥ್ ನೀಡಿದರು. ಚೆಪೌಕ್‍ನಲ್ಲಿ ಇಂದು ನಿರಶನ ಕೈಗೊಂಡ ಕೆ.ಪಳನಿಸ್ವಾಮಿ ಸುಪ್ರೀಂಕೋರ್ಟ್ ತೀರ್ಪಿನಂತೆ ಕಾವೇರಿ ನಿರ್ವಹಣಾ ಮಂಡಳಿ ರಚಿಸದಿರುವ ಕೇಂದ್ರ ಸರ್ಕಾರ, ನ್ಯಾಯಾಂಗ ನಿಂದನೆ ಮಾಡಿದೆ ಎಂದು ಖಂಡಿಸಿದರು. ತಮಿಳುನಾಡಿನ ವಿವಿಧೆಡೆ ಎಐಎಡಿಎಂಕೆ ಕಾರ್ಯಕರ್ತರು ಇಂದೂ ಕೂಡ ಪ್ರತಿಭಟನೆ ಮುಂದುವರಿಸಿದ್ದಾರೆ.