ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿಯವರು ಜಿಲ್ಲೆಗೆ ಆಗಮಿಸುತ್ತಿರುವುದರಿಂದ ನಮ್ಮ ಪಕ್ಷಕ್ಕೆ ಇನ್ನೂ ಹೆಚ್ಚಿನ ಶಕ್ತಿ ಬಂದಂತಾಗುತ್ತದೆ – ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ

ತುಮಕೂರು, ಏ.3- ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿಯವರು ಜಿಲ್ಲೆಗೆ ಆಗಮಿಸುತ್ತಿರುವುದರಿಂದ ನಮ್ಮ ಪಕ್ಷಕ್ಕೆ ಇನ್ನೂ ಹೆಚ್ಚಿನ ಶಕ್ತಿ ಬಂದಂತಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ಇಂದಿಲ್ಲಿ ತಿಳಿಸಿದರು.
ಸುದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷರಾದ ನಂತರ ರಾಹುಲ್‍ಗಾಂಧಿಯವರು ಇದೇ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಕಾರ್ಯಕರ್ತರಿಗೆ ಶಕ್ತಿ ತುಂಬಲಿದ್ದಾರೆ. ನಮಗೆ ಆನೆಬಲ ಬಂದಂತಾಗುತ್ತದೆ ಎಂದು ಹೇಳಿದರು.
ತುಮಕೂರು ಸಿದ್ದಗಂಗಾಮಠಕ್ಕೆ ತೆರಳಿ ಶ್ರೀಗಳ ಆಶೀರ್ವಾದ ಪಡೆಯುವರು ಎಂದು ತಿಳಿಸಿದರು.
ಬಿಜೆಪಿಯವರು ಏನೇ ಕುತಂತ್ರ ನಡೆಸಿದರೂ ನಮ್ಮ ಕಾಂಗ್ರೆಸ್ ಪಕ್ಷವೇ ಮತ್ತೆ ಅಧಿಕಾರಕ್ಕೆ ಬರಲಿದೆ. ಕರ್ನಾಟಕದಲ್ಲಿ ಅಮಿತ್‍ಶಾರ ಬೇಳೆಕಾಳು ಬೇಯುವುದಿಲ್ಲ. ಸಿಎಂ ಸಿದ್ದರಾಮಯ್ಯ ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳು ನಮಗೆ ಪೂರಕವಾಗಿವೆ ಎಂದರು.
ವೀರಶೈವ-ಲಿಂಗಾಯಿತ ಬೇರೆ ಬೇರೆ ಆಗಬೇಕೆಂಬುದು ನೂರಾರು ವರ್ಷಗಳ ಆಗ್ರಹವಾಗಿದೆ. ಪ್ರತ್ಯೇಕ ಲಿಂಗಾಯಿತ ಧರ್ಮಕ್ಕೆ ಶಿಫಾರಸು ಮಾಡಲಾಗಿದೆ ಎಂದು ಹೇಳಿದರು.
ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ನಮ್ಮ ಪುತ್ರ ಸಂತೋಷ್‍ಗೆ ಟಿಕೆಟ್ ಸಿಗುವುದು ಖಚಿತ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ನಗರದ ಶಾಸಕ ಡಾ.ರಫಿಕ್ ಅಹಮ್ಮದ್, ರಾಜ್ಯ ಯುವ ಘಟಕದ ಅಧ್ಯಕ್ಷ ಆರ್.ರಾಜೇಂದ್ರ, ಮಾಜಿ ಜಿಲ್ಲಾಧ್ಯಕ್ಷ ಶಫಿಅಹಮ್ಮದ್, ಮುಖಂಡ ಅಲ್ಲಾಭಕಾಶ್ ಮತ್ತಿತರರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ