ಕಾವೇರಿ ವಿವಾದ: ತ.ನಾಡು ಸಿಎಂ, ಡಿಸಿಎಂರಿಂದ ಉಪವಾಸ ಸತ್ಯಾಗ್ರಹ ಆರಂಭ

ಚೆನ್ನೈ: ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚನೆಗೆ ಒತ್ತಾಯಿಸಿ ತಮಿಳುನಾಡಿನ ಆಡಳಿತಾರೂಢ ಎಐಎಡಿಎಂಕೆ ಪಕ್ಷ ಇಂದಿನಿಂದ ಉಪವಾಸ ಸತ್ಯಾಗ್ರಹ ಶುರುಮಾಡಿದೆ. ಕಾವೇರಿ ನದಿ ನೀರು ಹಂಚಿಕೆ ಸಂಬಂಧದ ಸುಪ್ರೀಂಕೋರ್ಟ್‌ ತೀರ್ಪಿನಿಂದ ತಮಿಳುನಾಡಿಗೆ ಅನ್ಯಾಯವಾಗಿದ್ದು, ಕೇಂದ್ರ ಸರ್ಕಾರ ನಿರ್ವಹಣಾ ಮಂಡಳಿಯನ್ನು ರಚಿಸಬೇಕೆಂದು  ಎಐಎಡಿಎಂಕೆ ಒತ್ತಾಯಿಸುತ್ತಿದೆ.
ಮಂಗಳವಾರ ಬೆಳಗ್ಗೆಯೇ ಸಿಎಂ ಪಳನಿಸ್ವಾಮಿ, ಡಿಸಿಎಂ ಪನ್ನೀರ್‌ಸೆಲ್ವಂ ಸೇರಿದಂತೆ ಹಿರಿಯ ಸಚಿವರು, ನಾಯಕರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
ಈ ಉಪವಾಸ ಸತ್ಯಾಗ್ರಹದಲ್ಲಿ ಪಕ್ಷದ ಸಾವಿರಾರು ಕಾರ್ಯಕರ್ತರು ಪಾಲ್ಗೊಳ್ಳಲಿದ್ದು, ಸಾರ್ವಜನಿಕರ ಬೆಂಬಲವನ್ನೂ ನಾವು ನಿರೀಕ್ಷಿಸುತ್ತಿದ್ದೇವೆ ಎಂದು ಎಐಎಡಿಎಂಕೆ ಮುಖಂಡರು ತಿಳಿಸಿದ್ದಾರೆ.

 

 

 

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ