ಬೈಕ್‍ನಲ್ಲಿ ಹೋಗುತ್ತಿದ್ದ ಯುವಕ ನಿಯಂತ್ರಣ ತಪ್ಪಿ ಬಿದ್ದು ಮೃತ

ವಿಜಯಪುರ, ಏ.3- ಬೈಕ್‍ನಲ್ಲಿ ಹೋಗುತ್ತಿದ್ದ ಯುವಕ ನಿಯಂತ್ರಣ ತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ಕಲಗೇರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ಕಲಗೇರಿ ಗ್ರಾಮದ ಪಾನ ಕುಲಕರ್ಣಿ (20) ಮೃತಪಟ್ಟ ಯುವಕ. ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದ ಈತ ಫಲಿತಾಂಶದ ನಿರೀಕ್ಷೆಯಲ್ಲಿದ್ದ. ತಾಳಿಕೋಟೆಯಿಂದ ಕಲಗೇರಿಗೆ ಕುಲಕರ್ಣಿ ಬೈಕ್‍ನಲ್ಲಿ ಬರುತ್ತಿದ್ದಾಗ ದೇವರ ಹಿಪ್ಪರಗಿ ತಾಲೂಕಿನ ಕೆಸರಟ್ಟಿ ಕ್ರಾಸ್ ಬಳಿ ನಿಯಂತ್ರಣ ತಪ್ಪಿ ಬೈಕ್‍ನಿಂದ ಬಿದ್ದ ಪರಿಣಾಮ ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಸುದ್ದಿ ತಿಳಿದ ಕಲಗೇರಿ ಠಾಣೆ ಪೆÇಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಶವವನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ ನಂತರ ವಾರಸುದಾರರಿಗೆ ಹಸ್ತಾಂತರಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ