ಸಿಬಿಎಸ್‍ಇ ಪ್ರಶ್ನೆ ಪತ್ರಿಕೆಗಳ ಸೋರಿಕೆ: ಅರ್ಜಿ ತಿರಸ್ಕøತ

ನವದೆಹಲಿ, ಏ.4- ಸಿಬಿಎಸ್‍ಇ ಪ್ರಶ್ನೆ ಪತ್ರಿಕೆಗಳ ಸೋರಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಸಲ್ಲಿಸಿರುವ ಎಲ್ಲ ಅರ್ಜಿಗಳನ್ನು ಸುಪ್ರೀಂಕೋರ್ಟ್ ಇಂದು ತಿರಸ್ಕರಿಸಿದೆ.
ಮರುಪರೀಕ್ಷೆಗೆ ಸಂಬಂಧಿಸಿದಂತೆ ಪರೀಕ್ಷಾ ಮಂಡಳಿಯ ನಿರ್ಧಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ಸ್ಪಷ್ಟಪಡಿಸಿದೆ.
10ನೇ ತರಗತಿಯ ಗಣಿತ ಪರೀಕ್ಷೆ ಮತ್ತು 12ನೇ ತರಗತಿಯ ಅರ್ಥಶಾಸ್ತ್ರ ಪರೀಕ್ಷೆ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿರುವುದನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಸಲ್ಲಿಸಲಾಗಿರುವ ಅರ್ಜಿಯನ್ನು ಸಹ ಸುಪ್ರೀಂಕೋರ್ಟ್ ತಳ್ಳಿ ಹಾಕಿದೆ. ಕೆಲವು ವಿದ್ಯಾರ್ಥಿಗಳು ಮತ್ತು ಪೆÇೀಷಕರು ಸಲ್ಲಿಸಿರುವ ಅರ್ಜಿಗಳನ್ನು ಕೂಡ ನ್ಯಾಯಾಲಯ ಮಾನ್ಯ ಮಾಡಿಲ್ಲ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ