ಗೃಹ ಇಲಾಖೆಯ ಸಲಹೆಗಾರ ಕೆಂಪಯ್ಯ ವಿರುದ್ಧ ಶಿಸ್ತುಕ್ರಮಕ್ಕೆ ರಾಜ್ಯ ಮುಖ್ಯ ಚುನಾವಣಾಧಿಕಾರಿಯಿಂದ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ

 

ಬೆಂಗಳೂರು,ಏ.4-ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಕೆಂಗಣ್ಣಿಗೆ ಗುರಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರಮಾಪ್ತ ಹಾಗೂ ಗೃಹ ಇಲಾಖೆಯ ಸಲಹೆಗಾರ ಕೆಂಪಯ್ಯ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ರಾಜ್ಯ ಮುಖ್ಯ ಚು

ನಾವಣಾಧಿಕಾರಿ(ಸಿಇಒ) ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದ್ದಾರೆ.
ರಾಜ್ಯ ಚುನಾವಣಾ ಆಯೋಗದ ಮುಖ್ಯ ಅಧಿಕಾರಿ ಸಂಜೀವ್ ಕುಮಾರ್ ಅವರು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಓಂಪ್ರಕಾಶ್ ರಾವತ್ ಅವರಿಗೆ ಪತ್ರ ಬರೆದಿದ್ದು , ತಕ್ಷಣವೇ ಕೆಂಪಯ್ಯ ವಿರುದ್ದ ಶಿಸ್ತುಕ್ರಮ ಜರುಗಿಸಬೇಕೆಂದು ಮನವಿ ಮಾಡಿದ್ದಾರೆ.

ಕೆಂಪಯ್ಯ ವಿರುದ್ದ ಕೇವಲ ರಾಜಕೀಯ ಪಕ್ಷಗಳು ಮಾತ್ರವಲ್ಲದೆ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳು ಅವರ ಕಾರ್ಯ ವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾದ ದಿನದಿಂದಲೇ ನೀತಿ ಸಂಹಿತೆ ಜಾರಿಯಲ್ಲಿದೆ. ಯಾವುದೇ ಸಲಹೆಗಾರರು ತಮ್ಮ ಅಧಿಕಾರವನ್ನು ಚಲಾಯಿಸಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ನಾವು ಸ್ಪಷ್ಟಪಡಿಸಿದ್ದೇವೆ. ಆದರೂ ಕೆಂಪಯ್ಯ ಈಗಲೂ ತಾವು ಸಲಹೆಗಾರರು ಎಂದುಕೊಂಡಿದ್ದಾರೆ.

ಹೀಗಾಗಿ ಅವರ ವಿರುದ್ಧ ಶಿಸ್ತು ಕ್ರಮ ಅಗತ್ಯ ಎಂದು ಪತ್ರದಲ್ಲಿ ಉಲ್ಲೇಖಿಸಿರುವ ಸಂಜೀವ್‍ಕುಮಾರ್, ಕೆಂಪಯ್ಯ ವಿರುದ್ದ ವಿವಧ ರಾಜಕೀಯ ಪಕ್ಷಗಳು ಪೆÇಲೀಸರ ವಾಹನಗಳ ಮೂಲಕ ಹಣ ಸಾಗಿಸುತ್ತಿದ್ದಾರೆ ಎಂಬ ಆರೋಪ ಮಾಡಿವೆಎಂದಿದ್ದಾರೆ.
ಚುನಾವಣಾ ಯಂತ್ರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಕೆಂಪಯ್ಯ ಅವರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳದಿದ್ದರೆ ಮುಕ್ತ, ನ್ಯಾಯಸಮ್ಮತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸುವ ನಮ್ಮ ಉದ್ದೇಶ ಈಡೇರಿವುದಿಲ್ಲ ಎಂದಿದ್ದಾರೆ.

ರಾಜ್ಯದ ಮನವಿಯನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಓಂಪ್ರಕಾಶ್ ರಾವತ್, ಆಯುಕ್ತರಾದ ಅಶೋಕ್ ಲಾವಸ ಮತ್ತು ಸುನೀಲ್ ಅರೋರ ಅವರುಗಳು ಇಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.
ಈ ವೇಳೆ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ, ಪೆÇಲೀಸ್ ಮಹಾನಿರ್ದೇಶಕರಾದ ನೀಲಮಣಿ ರಾಜು ಮತ್ತಿತರರ ಜೊತೆ ಮಾತುಕತೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಆಯೋಗದ ಮೂಲಗಳು ತಿಳಿಸಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ