ಜೆಡಿಎಸ್‍ಗೆÀಅಖಂಡ ಶ್ರೀನಿವಾಸಮೂರ್ತಿ ರಾಜೀನಾಮೆ

ಬೆಂಗಳೂರು, ಏ.4-ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಜೆಡಿಎಸ್‍ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ವೈಯಕ್ತಿಕ ಕಾರಣದಿಂದ ಜೆಡಿಎಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದು, ಇದುವರೆಗೂ ಸಹಕರಿಸಿದ ರಾಷ್ಟ್ರೀಯ ಅಧ್ಯಕ್ಷರೂ, ರಾಜ್ಯಾಧ್ಯಕ್ಷರೂ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿರುವ ರಾಜೀನಾಮೆ ಪತ್ರವನ್ನು ಜೆಡಿಎಸ್ ರಾಜ್ಯಾಧ್ಯಕ್ಷರಾದ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕಳುಹಿಸಿದ್ದಾರೆ.
ಈಗಾಗಲೇ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರಿರುವ ಅವರು, ಶಾಸಕ ಸ್ಥಾನಕ್ಕೂ ಇತ್ತೀಚೆಗೆ ರಾಜೀನಾಮೆ ನೀಡಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ