ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗಾಗಿ ಬೆಂಗಳೂರಿಂದ ಮೈಸೂರಿನ ಚಾಮುಂಡಿ ಬೆಟ್ಟದವರೆಗೂ ಬರಿಗಾಲಿನಲ್ಲಿ ಪಾದಯಾತ್ರೆ

ಬೆಂಗಳೂರು,ಏ.4-ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗಾಗಿ ಬೆಂಗಳೂರು ನಗರ ಜೆಡಿಎಸ್ ಕಾರ್ಯಕರ್ತರು ಬೆಂಗಳೂರಿನಿಂದ ಮೈಸೂರಿನ ಚಾಮುಂಡಿ ಬೆಟ್ಟದವರೆಗೂ ಬರಿಗಾಲಿನಲ್ಲಿ ಪಾದಯಾತ್ರೆ ಮಾಡಲಿದ್ದಾರೆ.

ವಿಧಾನಸೌಧದ ಬಳಿಯಿಂದ ಇಂದು ಪಾದಯಾತ್ರೆ ಆರಂಭಿಸಲಾಗಿದ್ದು , ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಬೇಕು, ರಾಜ್ಯಾಧ್ಯಕ್ಷರಾದ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಬೇಕು ಎಂಬ ಉದ್ದೇಶದಿಂದ ಈ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ.
ಜೆಡಿಎಸ್ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿ ರಾಕೇಶ್ ನೇತೃತ್ವದಲ್ಲಿ ಹಲವು ಕಾರ್ಯಕರ್ತರು ಪಾದಯಾತ್ರೆಯನ್ನು ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ