ಸೆಲ್ಫಿ ಗೀಳಿಗೆ ಕಡಿವಾಣ ಹಾಕಲು ಮುಂದಾದ ಕೇಂದ್ರ

ಹೊಸದಿಲ್ಲಿ,ಏ.4

ಸೆಲ್ಫಿ ತೆಗೆದುಕೊಳ್ಳುವುದು ಇತ್ತೀಚಿನ ದಿನಗಳಲ್ಲಿ ಗೀಳಾಗಿ ಪರಿಣಮಿಸಿತೆ. ಕೆಲವರಿಗಂತೂ ಸೆಲ್ಫಿ ತೆಗೆದುಕೊಳ್ಳುವುದೇ ಒಂದು ಸಂಭ್ರಮ. ಆದರೆ, ಸೆಲ್ಫಿ ತೆಗೆದುಕೊಳ್ಳುವ ಭರದಲ್ಲಿ ಹಲವಾರಿ ಜನರು ಸಾವಿಗೀಡಾಗುತ್ತಿರುವ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.

ಹೀಗಾಗಿ ಇಂತಹ ಘಟನೆಗಳು ಸಂಭವಿಸುವ ಪ್ರವಾಸಿ ತಾಣಗಳನ್ನು ಗುರುತಿಸಿ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ.

ಲೋಕಸಭೆಯಲ್ಲಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಹಂಸರಾಜ್ ಗಂಗಾರಾಮ್ ಅಹಿರ್ ಉತ್ತರಿಸಿ, ಜನಪ್ರಿಯ ಪ್ರವಾಸಿ ತಾಣಗಳಲ್ಲಿ ನೋ-ಸೆಲ್ಫಿ-ಝೋನ್ ಫಲಕ ಹಾಕುವುದು ಸೇರಿದಂತೆ ಪ್ರವಾಸಿಗರ ರಕ್ಷಣೆಗಾಗಿ ಎಲ್ಲಾ ರೀತಿಯ ಕ್ರಮ ಕೈಗೊಳ್ಳುವುದು ಆಯಾ ರಾಜ್ಯಗಳ ಜವಾಬ್ದಾರಿ ಎಂದು ತಿಳಿಸಿದ್ದಾರೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ