ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ನಟ ಕಿಚ್ಚ ಸುದೀಪ್

ಬೆಂಗಳೂರು:ಏ-5: ಎರಡು ದಿನಗಳ ಹಿಂದಷ್ಟೇ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿ ಕುತೂಹಲ ಮೂಡಿಸಿದ್ದ ನಟ ಕಿಚ್ಚ ಸುದೀಪ್‌ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಕುತೂಹಲ ಇಮ್ಮಡಿಗೊಳಿಸಿದ್ದಾರೆ.

ಸಿಎಂ ಅಧಿಕೃತ ನಿವಾಸ ಕಾವೇರಿಗೆ ಆಗಮಿಸಿರುವ ಸುದೀಪ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ 1 ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ.

ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ಸುದೀಪ್‌ ಅವರಿಗೆ ಪಕ್ಷಕ್ಕೆ ಆಹ್ವಾನಿಸಿ ಕಾಂಗ್ರೆಸ್‌ ಪರ ಪ್ರಚಾರ ಮಾಡುವಂತೆ ಕೇಳಿಕೊಂಡಿರುವುದಾಗಿ ತಿಳಿದುಬಂದಿದೆ.

ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವ ಈ ಸಂದರ್ಭದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಪ್ರಬಲ ವಾಲ್ಮೀಕಿ ಸಮುದಾಯಕ್ಕೆ ಸೇರಿರುವ ಸುದೀಪ್‌ ಸೆಳೆಯಲು ರಾಜಕೀಯ ಪಕ್ಷಗಳು ಭಾರಿ ಕಸರತ್ತು ನಡೆಸುತ್ತಿದ್ದು ಸುದೀಪ್ ಅವರ ಮುಂದಿನ ನಡೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

actor sudeep, meets, cm siddaramaiah

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ