ಬೆಂಗಳೂರು:ಏ-5: ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ತಮಿಳುನಾಡಿನಲ್ಲಿ ಭಾರಿ ಹೋರಾಟ ನಡೆಯುತ್ತಿರುವ ಬೆನ್ನಲ್ಲೇ ಮಂಡಳಿ ರಚನೆ ಮಾಡಬಾರದು ಎಂದು ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಏ.12ರಂಫ಼್ದು ಕರ್ನಾಟಕ ಬಂದ್ ಗೆ ಕರೆ ನೀಡಿವೆ.
ಅತ್ತಿಬೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್, ಯಾವುದೇ ಕಾರಣಕ್ಕೂ ಕಾವೇರಿ ನಿರ್ವಹಣಾ ಮಂಡಳಿ ರಚಿಸಬಾರದು. ಇದನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳ ನೇತೃತ್ವದಲ್ಲಿ ಕರ್ನಾಟಕ ಬಂದ್ ನಡೆಸುವುದಾಗಿ ಹೇಳಿದರು.
ತಮಿಳರು ಬಿರಿಯಾನಿ ತಿಂದು ಸತ್ಯಾಗ್ರಹ ಮಾಡುತ್ತಿದ್ದಾರೆ. ನಾವು ಹೋರಾಟಕ್ಕಿಳಿಯುವ ಯೋಚನೆಯಲ್ಲಿರಲಿಲ್ಲ. ತಮಿಳರೇ ನಮ್ಮನ್ನು ಹೋರಾಟಕ್ಕಿಳಿಯುವಂತೆ ಮಾಡಿದ್ದಾರೆ ಎಂದು ಕಿಡಿ ಕಾರಿದರು.
ಇನ್ನು ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಕಮಲ್ ಹಾಸನ್ ಅವರು ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಲು ಕೇಂದ್ರದ ಮೇಲೆ ಒತ್ತಡ ಹೇರುವಂತೆ ತಮಿಳುನಾಡು ಸರ್ಕಾರಕ್ಕೆ ಒತ್ತಾಯಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಜನಿಕಾಂತ್ ಹಾಗೂ ಕಮಲ್ ಹಾಸನ್ ಅಭಿನಯದ ಯಾವುದೇ ಚಿತ್ರಗಳು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ನಾವು ಅವಕಾಶ ನೀಡುವುದಿಲ್ಲ ಎಂದು ವಾಟಾಳ್ ಗುಡುಗಿದ್ದಾರೆ.
Cauvery issue,karnataka bandh, on april 12,Vatal nagaraj