ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಯುವಕನೊಬ್ಬ ಆತ್ಮಹತ್ಯೆ

ಮೈಸೂರು, ಏ.5- ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲವಾಲ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೈಸೂರು ತಾಲ್ಲೂಕು ಇಲವಾಲ ಗ್ರಾಮದ ಮಂಜು(23) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ.
ಈತ ಇಲವಾಲದ ಜನತಾಕಾಲೋನಿ ವಾಸಿಯಾಗಿದ್ದು, ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ. ಯುವತಿಯೊಬ್ಬಳನ್ನು ಪ್ರೀತಿಸಿದ್ದ ಮಂಜು ಆಕೆಯನ್ನು ಮದುವೆ ಮಾಡಿಕೊಳ್ಳಲು ಇಚ್ಚಿಸಿದ್ದ. ಆದರೆ, ಯುವತಿ ಮದುವೆಯಾಗಲು ನಿರಾಕರಿಸಿದ್ದಳು. ಇದರಿಂದ ಮನನೊಂದು ಮಂಜು ಇಲವಾಲದ ದೊಡ್ಡಕೆರೆಗೆ ಹಾರಿ ಮೃತಪಟ್ಟಿದ್ದಾನೆ.
ಕೆರೆಯ ಕಟ್ಟೆ ಮೇಲೆ ಮೊಬೈಲ್, ಚಪ್ಪಲಿ ಇದ್ದುದನ್ನು ಕಂಡು ಸಾರ್ವಜನಿಕರು ಪೆÇಲೀಸರಿಗೆ ಸುದ್ದಿ ತಿಳಿಸಿದ್ದಾರೆ. ತಕ್ಷಣ ಇಲವಾಲ ಪೆÇಲೀಸರು ಕಾರ್ಯಾಚರಣೆ ಕೈಗೊಂಡು ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ