ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಿಂಬದಿ ಕುಳಿತಿದ್ದ ಮಹಿಳೆ ಸ್ಥಳದಲ್ಲೇ ಸಾವ

ಹುಬ್ಬಳ್ಳಿ, ಏ.5- ಹಿಂದಿನಿಂದ ಬಂದ ರಾಜ್ಯ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಿಂಬದಿ ಕುಳಿತಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದ ಕಾರವಾರ ಮೇಲ್ಸೇತುವೆ ಬಳಿ ನಡೆದಿದೆ.
ಯಲ್ಲವ್ವ ಕಿಳ್ಳಿಕ್ಯಾತ (45) ಮೃತ ದುರ್ದೈವಿ. ಮೃತ ಯಲ್ಲವ್ವ ಕಲಘಟಗಿ ತಾಲೂಕು ಬೋಗಿ ನಾಗರಕೊಪ್ಪ ನಿವಾಸಿಯಾಗಿದ್ದು, ತನ್ನ ಸಂಬಂಧಿ ಜತೆ ಬೈಕ್‍ನಲ್ಲಿ ಹುಬ್ಬಳ್ಳಿ ಕಡೆ ಬರುತ್ತಿದ್ದಾಗ ಕಾರವಾರದಿಂದ ಹುಬ್ಬಳ್ಳಿಗೆ ಬರುತ್ತಿದ್ದ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದು ಮಹಿಳೆಯ ತಲೆ ಮೇಲೆ ಬಸ್‍ನ ಗಾಲಿ ಹರಿದು ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಬಸ್ ಕಾರವಾರ ಡಿಪೆÇೀಗೆ ಸೇರಿದ್ದಾಗಿದೆ. ಈ ಸಂಬಂಧ ಹುಬ್ಬಳ್ಳಿ ದಕ್ಷಿಣ ಸಂಚಾರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ