ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಲಾರಿಗಳ ನಡುವೆ ಸಂಭವಿಸಿದ ಭೀಕರ ಅಪಘಾತ

ಚಿತ್ರದುರ್ಗ, ಏ.5- ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಲಾರಿಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಇಂದು ಬೆಳಗ್ಗೆ ಹಿರಿಯೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಲಾರಿ ಚಾಲಕ ಧಾರವಾಡ ಮೂಲದ ನಾಗಪ್ಪ ಮತ್ತು ಉತ್ತರ ಪ್ರದೇಶ ಮೂಲದ ರಂಜಿತ್ (28) ಮೃತಪಟ್ಟ ದುರ್ದೈವಿಗಳು.
ಇಂದು ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ವಾಹನಗಳು ಸಂಚರಿಸುತ್ತಿದ್ದ ವೇಳೆ ಸರಣಿ ಅಪಘಾತ ಸಂಭವಿಸಿದ್ದು, ಈ ಸಂದರ್ಭದಲ್ಲಿ ಎರಡು ಲಾರಿಗಳ ನಡುವೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸರಣಿ ಅಪಘಾತದಿಂದಾಗಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಈ ಮಾರ್ಗದಲ್ಲಿ ಸಂಚಾರ ದಟ್ಟಣೆ ಅಧಿಕವಾಗಿ ವಾಹನ ಸವಾರರು ಪರದಾಡುವಂತಾಯಿತು.
ಸುದ್ದಿ ತಿಳಿದ ಹಿರಿಯೂರು ಪಟ್ಟಣ ಠಾಣೆ ಪೆÇಲೀಸರು ಸ್ಥಳಕ್ಕೆ ದೌಡಾಯಿಸಿ ಇಬ್ಬರ ಶವಗಳನ್ನೂ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿ ತದನಂತರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ