ಕಾವೇರಿ ನದಿ ನೀರು ಹಂಚಿಕೆ ನಿರ್ವಹಣಾ ಮಂಡಳಿ ರಚನೆಗೆ ಒತ್ತಾಯಿಸಿ ಕರೆ ನೀಡಿದ್ದ ತಮಿಳುನಾಡು ಬಂದ್‍ನಿಂದಾಗಿ ಆ ರಾಜ್ಯಕ್ಕೆ ಕೆಎಸ್‍ಆರ್‍ಟಿಸಿ ಬಸ್ ಸಂಚಾರವನ್ನು ಸಂಪೂರ್ಣ ಸ್ಥಗಿತ

ಬೆಂಗಳೂರು, ಏ.5-ಕಾವೇರಿ ನದಿ ನೀರು ಹಂಚಿಕೆ ನಿರ್ವಹಣಾ ಮಂಡಳಿ ರಚನೆಗೆ ಒತ್ತಾಯಿಸಿ ಕರೆ ನೀಡಿದ್ದ ತಮಿಳುನಾಡು ಬಂದ್‍ನಿಂದಾಗಿ ಆ ರಾಜ್ಯಕ್ಕೆ ಕೆಎಸ್‍ಆರ್‍ಟಿಸಿ ಬಸ್ ಸಂಚಾರವನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿದೆ.
ಕಳೆದ ರಾತ್ರಿ ತಮಿಳುನಾಡಿನಿಂದ ನೈಟ್ ಟ್ರಿಪ್ ಬಸ್‍ಗಳು ಬೆಂಗಳೂರಿಗೆ ತಲುಪಿದ್ದು , ಮುಂಜಾನೆ ಹೊರಡಬೇಕಾಗಿದ್ದ ಎಲ್ಲ ಬಸ್ ಸೇವೆಯನ್ನು ನಿಲ್ಲಿಸಲಾಗಿದೆ.
ರಾಜ್ಯದಿಂದ ತಮಿಳುನಾಡಿನ ವಿವಿಧೆಡೆಗೆ ಸಂಪರ್ಕ ಬೆಳೆಸುವ ಸುಮಾರು 750ಕ್ಕೂ ಹೆಚ್ಚು ಕೆಎಸ್‍ಆರ್‍ಟಿಸಿ ಬಸ್‍ಗಳು ಕಾರ್ಯ ನಿರ್ವಹಿಸಿಲ್ಲ ಎಂದು ಇಲಾಖೆ ಮೂಲಗಳು ತಿಳಿಸಿವೆ.
ತಮಿಳುನಾಡಿನ ಬಸ್‍ಗಳನ್ನು ಮೈಸೂರು ರಸ್ತೆಯ ಸ್ಯಾಟ್‍ಲೈಟ್ ಬಸ್ ನಿಲ್ದಾಣ ಹಾಗೂ ಕೆಂಪೇಗೌಡ ಬಸ್ ನಿಲ್ದಾಣದ ಫ್ಲಾಟ್ ಫಾರಂಗಳಲ್ಲೇ ನಿಲ್ಲಿಸಲಾಗಿದ್ದು, ಸೂಕ್ತ ಭದ್ರತೆ ಒದಗಿಸಲಾಗಿದೆ. ಅವರು ಕೂಡ ಸೇವೆಯನ್ನು ನಿಲ್ಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ