ಸದಾಶಿವ ಆಯೋಗದ ವರದಿ ಜಾರಿಗೆ ಕೇಂದ್ರಕ್ಕೆ ಶಿಫಾರಸು ಮಾಡುವ ಕುರಿತಂತೆ ಭರವಸೆ ನೀಡುವ ಪಕ್ಷಗಳಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಸಮುದಾಯ ಬೆಂಬಲಿಸದೆ ಎಂದು ಮಾದಿಗ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಸಿದ್ದರಾಜು

ಬೆಂಗಳೂರು, ಏ.5-ಸದಾಶಿವ ಆಯೋಗದ ವರದಿ ಜಾರಿಗೆ ಕೇಂದ್ರಕ್ಕೆ ಶಿಫಾರಸು ಮಾಡುವ ಕುರಿತಂತೆ ಭರವಸೆ ನೀಡುವ ಪಕ್ಷಗಳಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಸಮುದಾಯ ಬೆಂಬಲಿಸದೆ ಎಂದು ಮಾದಿಗ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಸಿದ್ದರಾಜು ಹೇಳಿದರು.
ಗಾಂಧಿಭವನದಲ್ಲಿ ಡಾ.ಜಗಜೀವನರಾಮ್ ಅವರ ಜಯಂತಿ ಅಂಗವಾಗಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮಾದಿಗರ ನಡೆ ಯತ್ತಕಡೆ ಕುರಿತ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಅವರ ಮಾತನಾಡಿದರು.
ಸದಾಶಿವ ಆಯೊಗ ವರದಿ ಅನ್ವಯ ಪರಿಶಿಷ್ಟರಿಗಾಗಿ ಮೀಸಲಿಟ್ಟಿರುವ ಶೇ.15ರಲ್ಲಿ ಶೇ.6ರಷ್ಟು ಮೀಸಲಾತಿ ದೊರಕಿದೆ. ಆದರೆ ಈ ಮೀಸಲಾತಿ ಜಾರಿಗೆ ಭೋವಿ ಸಮಾಜ, ಕೋರಮ್ಮ, ಕೋರಸ ಹಾಗೂ ಇನ್ನಿತರ ಕೆಲವು ಸಮುದಾಯಗಳು ವಿರೊಧ ವ್ಯಕ್ತಪಡಿಸುತ್ತಿರುವುದು ಸರಿಯಲ್ಲ ಎಂದರು.
ಶಾಸಕ ಮಾನಪ್ಪ ವಜ್ಜಲ್ ಹಾಗೂ ಇವರ ಭೊವಿ ಸಮುದಾಯದ ನಾಯಕರು ವರದಿ ಜಾರಿಗೆ ಅಡ್ಡಿಪಡಿಸುತ್ತಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರದಿಂದ ಮಾದಿಗ ಸಮುದಾಯದ ಅಭಿವೃದ್ದಿಗೆ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ