ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಟಾಟಾ ಏಸ್‍ನಲ್ಲಿ ಹೋಗುತ್ತಿದ್ದಾಗ ವಾಹನ ಪಲ್ಟಿಯಾದ ಪರಿಣಾಮ 15 ವಿದ್ಯಾರ್ಥಿಗಳು ಗಂಭೀರವಾಗಿ ಗಾಯ:

ಬಾಗಲಕೋಟೆ, ಏ.6-ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಟಾಟಾ ಏಸ್‍ನಲ್ಲಿ ಹೋಗುತ್ತಿದ್ದಾಗ ವಾಹನ ಪಲ್ಟಿಯಾದ ಪರಿಣಾಮ 15 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೆರೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ಪರೀಕ್ಷೆಗೆ ಹಾಜರಾಗಬೇಕಿದ್ದ 15 ವಿದ್ಯಾರ್ಥಿಗಳು ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದು, ಇದರಲ್ಲಿ ಒಬ್ಬ ವಿದ್ಯಾರ್ಥಿಯ ಸ್ಥಿತಿ ಚಿಂತಾಜನಕವಾಗಿದೆ.
ಬಾದಾಮಿ ತಾಲ್ಲೂಕಿನ ಹೊಲಗೇರಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, ಚಾಲಕನ ಅಜಾಗರೂಕತೆಯಿಂದ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ವಿದ್ಯಾರ್ಥಿಗಳೆಲ್ಲರೂ ನೀರಬೂದಿಹಾಳ, ಕಗಲಗೊಂಬಕ್ಕೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಟಾಟಾ ಏಸ್‍ನಲ್ಲಿ ತೆರಳುತ್ತಿದ್ದರು. ಈ ಸಂಬಂಧ ಕೆರೂರು ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ