11ನೆ ಮಹಡಿಯಿಂದ ವ್ಯಕ್ತಿಯೊಬ್ಬರು ಹಾರಿ ಆತ್ಮಹತ್ಯೆ

ಬೆಂಗಳೂರು, ಏ.6- ಅಪಾರ್ಟ್‍ಮೆಂಟ್‍ವೊಂದರ 11ನೆ ಮಹಡಿಯಿಂದ ವ್ಯಕ್ತಿಯೊಬ್ಬರು ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊತ್ತನೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಅಕೋಲ ಮೂಲದ ಕುಮಾರಭಾಗವತ್(36) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಹೆಗಡೆನಗರದಲ್ಲಿನ ವಜ್ರಂ ಅಪಾರ್ಟ್‍ಮೆಂಟ್‍ನಲ್ಲಿ ಕುಮಾರಭಾಗವತ್ ವಾಸವಾಗಿದ್ದರು. ರಾತ್ರಿ 11 ಗಂಟೆವರೆಗೂ ಟಿವಿ ವೀಕ್ಷಿಸುತ್ತಿದ್ದ ಇವರು ತದನಂತರ 11ನೇ ಮಹಡಿಗೆ ಹೋಗಿ ಅಲ್ಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಮುಂಜಾನೆ ಈ ಪ್ರಕರಣ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಸುದ್ದಿ ತಿಳಿದ ಕೊತ್ತನೂರು ಠಾಣೆ ಪೆÇಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ