ಮಹಿಳಾ ಶೌಚಾಲಯ ಬಳಸಿದ್ದ ಪೆÇಲೀಸ್ ಅಧಿಕಾರಿಯ ವಿರುದ್ಧ ಕ್ರಮ:

ಮೈಸೂರು, ಏ.6- ಮಹಿಳಾ ಶೌಚಾಲಯ ಬಳಸಿದ್ದ ಪೆÇಲೀಸ್ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೆÇಲೀಸ್ ಆಯುಕ್ತ ಎ.ಸುಬ್ರಹ್ಮಣ್ಯೇಶ್ವರ ರಾವ್ ತಿಳಿಸಿದ್ದಾರೆ. ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಪೆÇಲೀಸ್ ಅಧಿಕಾರಿಯೊಬ್ಬರು ಮಹಿಳಾ ಶೌಚಾಲಯಕ್ಕೆ ತೆರಳಿದ್ದರು.
ಸಂಚಾರಿ ಪೆÇಲೀಸ್ ಠಾಣೆ ಪೆÇಲೀಸರೊಬ್ಬರು ಮಹಿಳಾ ಶೌಚಾಲಯಕ್ಕೆ ತೆರಳಿದ್ದನ್ನು ಅಲ್ಲಿನ ಸಿಬ್ಬಂದಿ ಮತ್ತು ಸಾರ್ವಜನಿಕರು ಪ್ರಶ್ನಿಸಿದಾಗ ಉಡಾಫೆ ಉತ್ತರ ನೀಡಿದ್ದರು.
ಕೆಲವರು ಅದನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾರೆ. ಇದು ವೈರಲ್ ಆದ ಹಿನ್ನೆಲೆಯಲ್ಲಿ ಪೆÇಲೀಸ್ ಆಯುಕ್ತರು ಈ ಬಗ್ಗೆ ಪ್ರತಿಕ್ರಿಯಿಸಿ ಘಟನೆಯ ಮಾಹಿತಿ ಪಡೆದು ತಪ್ಪಿತಸ್ಥ ಪೆÇಲೀಸ್ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ